ಬೆಂಗಳೂರು,ನ.29- ಕೇಂದ್ರ ಸರ್ಕಾರ ಒಂದರಿಂದ 8ನೇ ತರಗತಿವರೆಗಿನ ಪರಿಶಿಷ್ಟ ಜಾತಿ/ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಮಕ್ಕಳಿಗೆ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸುವ ಮೂಲಕ ಕೇಂದ್ರ ಸರ್ಕಾರ ತೊಘಲಕ್ ನಿರ್ಧಾರ ಕೈಗೊಂಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲವು ದಶಕಗಳಿಂದಲೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಎರಡೂವರೆ ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬದ ಮಕ್ಕಳಿಗೆ ಮಾಸಿಕ 225 , ವಸತಿ ಸಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ 525 ರೂ.ಗಳನ್ನು 10 ತಿಂಗಳ ಅವಧಿಗೆ ವಿತರಿಸಲಾಗುತ್ತಿತ್ತು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವೆಬ್‍ಸೈಟ್‍ನಲ್ಲಿ ಹೊಸ ಆದೇಶ ಪ್ರಕಟಗೊಂಡಿದ್ದು, ಇನ್ನು ಮುಂದೆ ಸಂಸ್ಥೆಯ ನೋಡಲ್ ಅಧಿಕಾರಿಗಳು, ರಾಜ್ಯ ನೋಡಲ್ ಅಧಿಕಾರಿಗಳು, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಮಾತ್ರ ಅಲ್ಪಸಂಖ್ಯಾತರ ವ್ಯವಹಾರಗಳ ಯೋಜನೆಯ ವಿದ್ಯಾರ್ಥಿ ವೇತನಗಳಿಗೆ ಪರಿಗಣಿಸುವಂತೆ ಸೂಚನೆ ನೀಡಲಾಗಿದೆ.
ಗಡಿ ವಿವಾದ ಸಮರ್ಥ ವಾದಕ್ಕೆ ಸಿದ್ಧ: CM ಬೊಮ್ಮಾಯಿ
ಈ ಕುರಿತ ಆಕ್ರೋಶ ವ್ಯಕ್ತಪಡಿಸಿರುವ ರಣದೀಪ್ ಸಿಂಗ್ ಸುರ್ಜೆವಾಲ, ಬಿಜೆಪಿ ಬಡವರ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿಯುವ ಹುನ್ನಾರ ನಡೆಸಿದೆ. 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸುವ ಮೂಲಕ ಶಿಕ್ಷಣದ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಸಚಿವರು ಬೆಳಗಾವಿ ಪ್ರವೇಶಿಸಿದರೆ ತಕ್ಕ ಪಾಠ: ಕರವೇ ಎಚ್ಚರಿಕೆ
ಆರ್‍ಟಿಇ ಕಾಯ್ದೆ ಪ್ರಕಾರ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿ. ಅದರೆ ಕೇಂದ್ರ ಸರ್ಕಾರ ಮಕ್ಕಳ ಈ ಹಕ್ಕನ್ನು ಕಸಿಯುತ್ತಿದೆ. ಕಾಂಗ್ರೆಸ್ ಇದನ್ನು ಒಪ್ಪುವುದಿಲ್ಲ. ಮತ್ತೆ ಸುಮ್ಮನೆ ಇರುವುದಿಲ್ಲ. ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.
Student, stipend, central, government, stop, Congress, Surjewala,