ವಿದ್ಯಾರ್ಥಿಗಳಿಂದ ಶಾಲೆಯಲ್ಲೇ ನಮಾಜ್, ಸ್ಥಳೀಯರಿಂದ ವಿರೋಧ

Social Share

ಮಂಗಳೂರು, ಫೆ.12- ಹಿಜಾಬ್ ಗದ್ದಲವೇ ಜ್ವಾಲಾಮುಖಿಯಾಗಿರುವಾಗ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ನಮಾಜ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲ್ಲೂಕಿನ ಅಂಕತಡಕದ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಫೆಬ್ರವರಿ 4ರ ಘಟನೆಯ ಈ ವಿಡಿಯೋ ವೈರಲ್ ಆಗಿದೆ.
ಸ್ಥಳೀಯರು ನಮಾಜ್‍ಗೆ ವಿರೋಧ ವ್ಯಕ್ತ ಪಡಿಸಿದ್ದರಿಂದ ವಿವಾದ ಸೃಷ್ಟಿಯಾಗಿದೆ. ದೂರು ಆಧರಿಸಿ ಶಿಕ್ಷಣ ಇಲಾಖೆ ಅಧಿಕಾರಿಗಳು ನಿನ್ನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಮಾಜ್ ಮಾಡಿರುವುದು ತಮ್ಮ ಗಮನಕ್ಕೆ ಬರುತ್ತಿದ್ದಂತೆ ತರಗತಿಯ ಕೊಠಡಿಯಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ಅನುಸರಿಸದಂತೆ ವಿದ್ಯಾರ್ಥಿಗಳಿಗೆ ಸೂಚಿಸಿರುವುದಾಗಿ ಶಿಕ್ಷಕರು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಂಪನ್ಮೂಲ ವ್ಯಕ್ತಿಗಳು ಸೂಚಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

Articles You Might Like

Share This Article