ಶಾಪಿಂಗ್ ಕಾಂಪ್ಲೆಕ್ಸ್ ನಿಂದ ಬಿದ್ದ ಇಬ್ಬರು ವಿದ್ಯಾರ್ಥಿಗಳು, ಓರ್ವ ವಿದ್ಯಾರ್ಥಿನಿ ಸಾವು

Spread the love

ಬೆಂಗಳೂರು, ಮೇ 21- ಶಾಪಿಂಗ್ ಮಾಡಲು ಸ್ನೇಹಿತರ ಜತೆ ಕಾಂಪ್ಲೆಕ್ಸ್‍ಗೆ ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಬಿಕಾಂ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಂದು ಮಧ್ಯಾಹ್ನ ಸಂಭವಿಸಿದೆ. ಬ್ರಿಗೇಡ್ ರಸ್ತೆಯಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್‍ಗೆ ಸ್ನೇಹಿತರ ಜತೆ ಇಬ್ಬರು ಬಿಕಾಂ ವಿದ್ಯಾರ್ಥಿಗಳು ಹೋಗಿದ್ದಾರೆ.

ಆ ಸಂದರ್ಭದಲ್ಲಿ ಕಾಂಪ್ಲೆಕ್ಸ್‍ನ ಎರಡನೆ ಮಹಡಿಯ ಕಿಟಕಿಯಿಂದ ಆಯತಪ್ಪಿ ಇಬ್ಬರು ವಿದ್ಯಾರ್ಥಿಗಳು ಕೆಳಗೆ ಬಿದ್ದು ಗಂಭೀರ ಗಾಯಗೊಂಡರು.
ತಕ್ಷಣ ಅವರಿಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ವಿದ್ಯಾರ್ಥಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.

Facebook Comments