Wednesday, October 16, 2024
Homeರಾಜ್ಯನಾಳೆ ಎಸ್‍ಐ ಪರೀಕ್ಷೆ : ನಿಷೇಧಾಜ್ಞೆ

ನಾಳೆ ಎಸ್‍ಐ ಪರೀಕ್ಷೆ : ನಿಷೇಧಾಜ್ಞೆ

ಬೆಂಗಳೂರು,ಜ.22- ನಗರದ 117 ಪರೀಕ್ಷಾ ಕೇಂದ್ರಗಳಲ್ಲಿ ನಾಳೆ, ಪೊಲೀಸ್ ಸಬ್ ಇನ್‍ಸ್ಪೆಕ್ಟರ್(ಸಿವಿಲ್) ಹುದ್ದೆಗೆ ನೇರನೇಮಕಾತಿಯ ಮರುಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಾಳೆ ಈ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ.

ರಾಮಲಲ್ಲಾ ಕಾರ್ಯಕ್ರಮ ನೇರ ಪ್ರಸಾರಕ್ಕೆ ತಮಿಳುನಾಡಿನಲ್ಲಿ ಕಿಡಿಗೇಡಿಗಳಿಂದ ಅಡ್ಡಿ

ನಾಳೆ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಕ್ತಾಯಗೊಳ್ಳು ವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News