ಬೆಂಗಳೂರು,ಫೆ.29- ಕಳೆದ 8 ವರ್ಷಗಳ ಹಗ್ಗಜಗ್ಗಾಟದ ಬಳಿಕ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸರ್ಕಾರ ಕೊನೆಗೂ ಸ್ವೀಕರಿಸಿದೆ. ಹಲವು ಪ್ರಬಲ ಸಮುದಾಯಗಳ ತೀವ್ರ ವಿರೋಧದ ನಡುವೆಯೂ ಲೋಕಸಭೆ ಚುನಾವಣೆ ಹಂತದಲ್ಲೇ ವರದಿ ಸ್ವೀಕರಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಸವಾಲಿನ ಸನ್ನಿವೇಶಕ್ಕೆ ಮುಖಾಮುಖಿಯಾಗಿದೆ.
2015-16 ರಲ್ಲಿ ಆಗಲೂ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸರ್ಕಾರ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ನೇತೃತ್ವದಲ್ಲಿ 162 ಕೋಟಿ ರೂ. ವೆಚ್ಚ ಮಾಡಿ ಮನೆಮನೆಗೆ ತೆರಳಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಿತ್ತು. ಅದರಲ್ಲಿ ಸುಮಾರು 70 ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಮಾಹಿತಿಯನ್ನು ಕಲೆ ಹಾಕಲಾಗಿತ್ತು.ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಆಡುಮಾತಿನಲ್ಲಿ ಜಾತಿಜನಗಣತಿ ಎಂದು ಪ್ರಚಲಿತವಾಗಿತ್ತು.
ಸಿದ್ದರಾಮಯ್ಯನವರ ಸರ್ಕಾರದ ಕೊನೆಯ ಅವಧಿಯಲ್ಲಿ ವರದಿ ಸಿದ್ಧವಾಗಿದ್ದರೂ ಅದನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ನಂತರ ನೀತಿ ಸಂಹಿತೆ ಎದುರಾಗಿತ್ತು. ಅತಂತ್ರ ವಿಧಾನಸಭೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಸರ್ಕಾರ ರಚನೆಯಾಗಿತ್ತು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಅವರ ಒಂದು ವರ್ಷ ಏಳು ತಿಂಗಳ ಅವಧಿಯಲ್ಲಿ ವರದಿ ಸ್ವೀಕಾರಗೊಳ್ಳಲಿಲ್ಲ.
ನಂತರ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಜೈಪ್ರಕಾಶ್ ಹೆಗ್ಡೆ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ಮಾಡಿದ್ದರು. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೂ ವರದಿ ಸಲ್ಲಿಕೆಯಾಗಲಿಲ್ಲ.ವಿಧಾನಸಭೆ ಚುನಾವಣೆ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ವರದಿಯನ್ನು ಸ್ವೀಕರಿಸುವುದಾಗಿ ಹೇಳುತ್ತಿತ್ತು. ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರ ಅಕಾರವ ಡಿಸೆಂಬರ್ಗೆ ಮುಕ್ತಾಯಗೊಂಡರೂ ಕೂಡ 2 ಬಾರಿ ಅಕಾರ ಅವ ವಿಸ್ತರಣೆ ಮಾಡಲಾಗಿತ್ತು. ಇಂದಿಗೆ ಆ ಅವ ಮುಕ್ತಾಯಗೊಳ್ಳುತ್ತಿರುವುದರಿಂದ ವರದಿ ಸಲ್ಲಿಸುವುದು ಅನಿವಾರ್ಯವಾಗಿತ್ತು. ಹೀಗಾಗಿ ಜಯಪ್ರಕಾಶ್ ಹೆಗ್ಡೆ ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.
ಮೂಲಗಳ ಪ್ರಕಾರ ಕಾಂತರಾಜು ವರದಿಯ ದತ್ತಾಂಶಗಳನ್ನು ಆಧಾರವಾಗಿಟ್ಟುಕೊಂಡು ಜಯಪ್ರಕಾಶ್ ಹೆಗ್ಡೆ ಪ್ರತ್ಯೇಕ ವರದಿ ಸಿದ್ಧಪಡಿಸಿದ್ದಾರೆ. ಪ್ರಬಲ ಸಮುದಾಯಗಳು ತಮ್ಮ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ ಎಂದು ವಿರೋಧ ವ್ಯಕ್ತಪಡಿಸುತ್ತಿದ್ದವು. ಒಕ್ಕಲಿಗ ಸಮುದಾಯ ವರದಿಯನ್ನು ಸ್ವೀಕರಿಸಬಾರದು. ಹೊಸದಾಗಿ ಸಮೀಕ್ಷೆ ನಡೆಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿತ್ತು. ಅದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿ ಸೇರಿದಂತೆ ಶಾಸಕ ಚೆಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು ಸಹಿ ಹಾಕಿದ್ದರು.
ವೀರಶೈವ ಸಮುದಾಯವು ವರದಿಯನ್ನು ವಿರೋಸಿ ಕಾಂಗ್ರೆಸ್ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ಮನವಿ ನೀಡಿತ್ತು. ವರದಿಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸುವ ಬದಲಾಗಿ ವೀರಶೈವ ಲಿಂಗಾಯತ ಸಮುದಾಯದ ಉಪಪಂಗಡಗಳನ್ನು ಏಕೀಕೃತ ನಮೂನೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಬೇಕೆಂಬ ಮನವಿ ಮಾಡಲಾಗಿತ್ತು.ಜಯಪ್ರಕಾಶ್ ಹೆಗ್ಡೆ ಆಯೋಗ ಸಕಾರಾತ್ಮಕವಾಗಿ ಪರಿಗಣಿಸಿದೆ ಎಂದು ತಿಳಿದುಬಂದಿದೆ.
ಕಾಂತರಾಜು ಆಯೋಗದ ಶಿಫಾರಸ್ಸಿನ ಮೂಲಪ್ರತಿ ನಾಪತ್ತೆಯಾಗಿದೆ ಎಂಬ ದೂರುಗಳಿವೆ. ಜಯಪ್ರಕಾಶ್ ಹೆಗ್ಡೆ ಸಮೀಕ್ಷೆಯ ದತ್ತಾಂಶಗಳನ್ನೇ ಆಧಾರವಾಗಿಟ್ಟುಕೊಂಡು ಮೀಸಲಾತಿ ಪರಿಷ್ಕರಣೆ, ಸರ್ಕಾರಿ ಸೌಲಭ್ಯಗಳ ಹಂಚಿಕೆ ಸೇರಿದಂತೆ ಹಲವು ವಿಚಾರಗಳಲ್ಲಿ ಗಮನಾರ್ಹವಾದ ಶಿಫಾರಸ್ಸು ಮಾಡಿದೆ ಎಂದು ಹೇಳಲಾಗಿದೆ. ಆಯೋಗದ ವರದಿ ಇಂದು ಸಂಜೆ ನಡೆಯುವ ಸಚಿವ ಸಂಪುಟದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.