ಬೆಂಗಳೂರು: ದೀರ್ಘಕಾಲದ ಸೊಂಟ ನೋವಿನಿಂದ ಬಳಲುತ್ತಿದ್ದ ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ರೋಬೋಟ್ ಸಹಾಯದ ಮೂಲಕ “ಹಿಪ್ ಬದಲಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ಮೂಳೆಚಿಕಿತ್ಸಾ ವಿಭಾಗದ ಪ್ರಧಾನ ನಿರ್ದೇಶಕ ನಾರಾಯಣ್ ಹುಲ್ಸೆ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಶಸ್ತ್ರಚಿಕಿತ್ಸೆ ಬಳಿಕವೇ ರೋಗಿಯು ನಡೆಯಲು ಸಶಕ್ತರಾಗಿದ್ದರು. ಈ ಕುರಿತು ಮಾತನಾಡಿದ ಡಾ. ನಾರಾಯಣ್ ಹುಲ್ಸೆ, ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ರೋಗಿಯು ಮೂರು ವರ್ಷದ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿ, ಅದರ ಅಡ್ಡಪರಿಣಾಮದಿಂದ ಅವಾಸ್ಕುಲರ್ ನೆಕ್ರೋಸಿಸ್ (AVN) ಗೆ ಒಳಗಾಗಿ, ದೀರ್ಘಕಾಲದ ಸೊಂಟದ ನೋವಿನಿಂದ ಬಳಲುತ್ತಿದ್ದರು.
ವಿಶ್ವಾದ್ಯಂತ ಅನೇಕ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದರೂ ಎಲ್ಲಿಯೂ ಸಫಲ ಕಾಣಲಿಲ್ಲ, ಅಷ್ಟೆ ಅಲ್ಲದೆ, ಎರಡು ವಿಫಲ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ಇಲ್ಲಿ ನಮ್ಮ ತಂಡ ಅವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರು ಎರಡೂ ಭಾಗದಲ್ಲೂ ಸೊಂಟ ಸರಿಪಡಿಸುವ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಿರ್ಧರಿಸಲಾಯಿತು, ಅತ್ಯಾಧುನಿಕ ರೋಬೋಟ್ ಸಹಾಯದಿಂದ ಅವರಿಗೆ ಹಿಪ್ ಬದಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಯಿತು, ರೋಗಿಯು ಶಸ್ತ್ರಚಿಕಿತ್ಸೆಗೆ ಒಳಗಾದ ಅದೇ ದಿನವೇ ನಡೆದಾಡಲು ಸಾಧ್ಯವಾಯಿತು ಎಂದು ವಿವರಿಸದರು,
ಬೆಂಗಳೂರಿನ ಫೋರ್ಟಿಸ್ ಹಾಸ್ಪಿಟಲ್ಸ್‌ನ ಬಿಸಿನೆಸ್ ಹೆಡ್ ಶ್ರೀ ಅಕ್ಷಯ್ ಒಲೇಟಿ, “ಫೋರ್ಟಿಸ್‌ನಲ್ಲಿ, ಇತ್ತೀಚಿನ ರೊಬೊಟಿಕ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಅತ್ಯಾಧುನಿಕ ಚಿಕಿತ್ಸೆಯನ್ನು ಒದಗಿಸಲು ನಾವು ಹೆಮ್ಮೆಪಡುತ್ತೇವೆ. ಇದು ಹೆಚ್ಚು ನಿಖರವಾದ, ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸೆಗಳನ್ನು ನೀಡಲು ನಮಗೆ ಅನುವು ಮಾಡಿಕೊಡುತ್ತದೆ, ಇದು ವೇಗವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಒಟ್ಟಾರೆ ರೋಗಿಯ ಅನುಭವವನ್ನು ಉತ್ತೇಜಿಸುತ್ತದೆ. ನಮ್ಮ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಲು ನವೀನ ತಂತ್ರಜ್ಞಾನಗಳನ್ನು ನಿರಂತರವಾಗಿ ಸಂಯೋಜಿಸಲು ನಾವು ಬದ್ಧರಾಗಿದ್ದೇವೆ. ಎಂದು ಹೇಳಿದರು