ರಾಜ್ಯಸಭೆಗೆ ಸುಧಾ ಮೂರ್ತಿಯವರನ್ನು ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ಮುರ್ಮು

ನವದೆಹಲಿ,ಮಾ.8- ಸಾಹಿತಿ, ಲೇಖಕಿ ಹಾಗೂ ಇನೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಿ ನರೇಂದ್ರಮೋದಿ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದಕ್ಕೆ ಅಂಕಿತ ಹಾಕಿದ್ದಾರೆ. ಶಿಕ್ಷಣ, ಸಮಾಜಸೇವೆ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪರಿಮಿತ ಸೇವೆ ಸಲ್ಲಿಸಿರುವ ಸುಧಾ ನಾರಾಯಣಮೂರ್ತಿ ಅವರನ್ನು ಮಹಿಳಾ ದಿನಾಚರಣೆಯಂದೇ ರಾಜಸಭೆಗೆ ನಾಮನಿರ್ದೇಶನ ಮಾಡಿರುವುದು ನಾರಿಶಕ್ತಿಯ ಪ್ರಬಲ ಸಾಕ್ಷಿಯಾಗಿದೆ. … Continue reading ರಾಜ್ಯಸಭೆಗೆ ಸುಧಾ ಮೂರ್ತಿಯವರನ್ನು ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ಮುರ್ಮು