ಬೆಂಗಳೂರು,ಮಾ.25– ಖ್ಯಾತ ವಕೀಲರು ಹಾಗೂ ವಾಗಿಗಳಾದ ಸುಧೀರ್‌ಕುಮಾರ್ ಮುರೊಳ್ಳಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರನ್ನಾಗಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್‌ಕುಮಾರ್ ಸೊರಕೆ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕಾಫಿನಾಡು ಹಾಗೂ ಕರಾವಳಿ ಭಾಗದಲ್ಲಿ ತಮದೇ ಆದ ವರ್ಚಸ್ಸನ್ನು ಹೊಂದಿರುವ ಸುಧೀರ್‌ಕುಮಾರ್ ಮುರೊಳ್ಳಿ ಅವರು ಉತ್ತಮ ಸಂಘಟನಾಕಾರರಾಗಿದ್ದು ಜೊತೆಗೆ ವಾಗಿಗಳೂ ಆಗಿದ್ದಾರೆ.
ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸ್ನೇಹಜೀವಿಯಾಗಿ ಸಮಾಜಮುಖಿ ಹಾಗೂ ಶೃಂಗೇರಿ, ಕೊಪ್ಪ ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇವರ ಕಾರ್ಯವೈಖರಿಯನ್ನು ಪರಿಗಣಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.