Sunday, November 3, 2024
Homeರಾಜ್ಯಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸುಧೀರ್ ಮರೋಳಿ ರಾಜೀನಾಮೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸುಧೀರ್ ಮರೋಳಿ ರಾಜೀನಾಮೆ

ಚಿಕ್ಕಮಗಳೂರು,ಜ.15- ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಸುಧೀರ್ ಮುರೋಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮದಲ್ಲಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿರುವ ಅವರು, ಲೋಕಸಭೆ ಚುನಾವಣೆಗೆ ತಾವು ಆಕಾಂಕ್ಷಿಯಾಗಿದ್ದು, ಅದಕ್ಕೆ ಸಂಬಂಧಪಟ್ಟಂತೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಾಗಿರುವುದರಿಂದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದರು.

ಕೆಪಿಸಿಸಿ ವಕ್ತಾರರ ಜವಾಬ್ದಾರಿಯಲ್ಲಿ ಮುಂದುವರೆಯುತ್ತೇನೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಹೊಸಬರಿಗೆ ಅವಕಾಶ ದೊರೆಯಬೇಕು ಎಂಬ ಕಾರಣಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ. ಇದನ್ನು ಅನ್ಯತಾ ಭಾವಿಸಬೇಡಿ ಎಂದು ಹೇಳಿದ್ದಾರೆ.

ಉಡುಪಿ ಮತ್ತು ಚಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿ ಚುನಾವಣೆ ತಯಾರಿಗಳಾಗಬೇಕಿದೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ಅವಕಾಶ ಹೆಚ್ಚಿವೆ. ಪ್ರತಿಯೊಬ್ಬ ಕಾರ್ಯಕರ್ತರಲ್ಲೂ ಉತ್ಸಾಹ ಕಂಡುಬರುತ್ತಿದೆ. ಕೇಂದ್ರ ಸರ್ಕಾರದ ವೈಫಲ್ಯಗಳು ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನ ತುಲನೆ ಮಾಡಿ ನೋಡುತ್ತಿದ್ದಾರೆ. ಕಾಂಗ್ರೆಸ್ ಮಾತ್ರವೇ ಜನರ ಜೀವನ ಸುಧಾರಣೆಗೆ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಮನವರಿಕೆಯಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ವಧರ್ಮ ಮತ್ತು ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುವ ಬದ್ಧತೆ ಕಾಂಗ್ರೆಸ್‍ನಲ್ಲಿದೆ ಎಂದು ತಿಳಿಸಿದ್ದಾರೆ.

“ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ” ಎಂದು ಶ್ರೀರಾಮ ನನ್ನ ಕನಸಲ್ಲಿ ಬಂದು ಹೇಳಿದ್ದಾನೆ

ಪಕ್ಷದ ಸಂಘಟನೆ ವಿಷಯದಲ್ಲಿ ತಾವು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು, ಮುಂದಿನ ದಿನಗಳಲ್ಲೂ ಇದೇ ಬದ್ಧತೆಯನ್ನು ಮುಂದುವರೆಸುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍¸ ಹೆಚ್ಚು ಸ್ಥಾನ ಗೆಲ್ಲಬೇಕು. ಕೇಂದ್ರದಲ್ಲಿ ಜನಪರ ಆಡಳಿತ ಅಸ್ತಿತ್ವಕ್ಕೆ ಬರಬೇಕೆಂಬುದು ತಮ್ಮ ಅಭಿಲಾಷೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸುಧೀರ್ ಮುರೋಳಿ ರಾಜಿನಾಮೆ ಘೋಷಿಸುತ್ತಿದ್ದಂತೆ ಹಿರಿಯ ಮೂಖಂಡ ನಾಗೇಶ್ ಸೇರಿದಂತೆ ಹಲವರು ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಲೋಕಸಭೆ ಚುನಾವಣೆವರೆಗೂ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕು. ಇದರಿಂದಾಗಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಒತ್ತಾಯಿಸಿದರು.

RELATED ARTICLES

Latest News