ಕ್ಯಾತಸಂದ್ರ ಬಳಿ ಪಾಳುಬಿದ್ದ ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಅಪರಿಚಿತ ವ್ಯಕ್ತಿ
ತುಮಕೂರು, ಮೇ 31- ನೇಣು ಬಿಗಿದುಕೊಂಡು ಅಪರಿಚಿತ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕ್ಯಾತಸಂದ್ರ ಸಮೀಪದ ಪಾಳುಬಿದ್ದ ಲಾಡ್ಜ್ ನಲ್ಲಿ ನಡೆದಿದೆ. ಲಾಡ್ಜ್ ನಲ್ಲಿ ಶವ ನೇತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕ್ಯಾತಸಂದ್ರ ಠಾಣೆ ಪೊಲೀಸರಿಗೆ ಸುದ್ದಿ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ವ್ಯಕ್ತಿಯ ಹೆಸರು, ವಿಳಾಸ ಪತ್ತೆಯಾಗಿಲ್ಲ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಶವ ಪರೀಕ್ಷೆ ನಂತರ ತಿಳಿದುಬರಲಿದೆ. ಈ ಸಂಬಂಧ ಕ್ಯಾತಸಂದ್ರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.