ಪದ್ಮಶ್ರೀ ವಿಜೇತ ಸೂಲಗಿತ್ತಿ ನರಸಮ್ಮಗೆ ಅನಾರೋಗ್ಯ, ಐಸಿಯುನಲ್ಲಿ ಚಿಕಿತ್ಸೆ

Sulagitti-Narasamma--01
ತುಮಕೂರು, ನ.30- ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಸೂಲಗಿತ್ತಿ ನರಸಮ್ಮ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೊದೊಯ್ಯಲಾಗಿದೆ.

ಕಳೆದು15 ದಿನಗಳಿಂದ ತಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಸೂಲಗಿತ್ತಿ ನರಸಮ್ಮ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ತೊಂದರೆಯಿಂದ ನರಸಮ್ಮ ಬಳಲುತ್ತಿದ್ದು, ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು.

ನರಸಮ್ಮನವರು ಸಮಾಜಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ, ನರಸಮ್ಮರವರ ಜೀವಿತಾವಧಿಯವರೆಗಿನ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲು ಮುಂದಾಗಿದೆ.  ಈಗಾಗಲೇ 15 ದಿನಗಳಿಂದ ಸಿದ್ದಗಂಗಾ ಆಸ್ಪತ್ರೆಯ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಲಿದೆ.

ಸಿದ್ದಗಂಗಾ ಆಸ್ಪತ್ರೆಯಲ್ಲಿ ನರಸಮ್ಮ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಸಂಸದರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

Sri Raghav

Admin