Friday, December 13, 2024
Homeಇದೀಗ ಬಂದ ಸುದ್ದಿಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿಯುವುದು ಫಿಕ್ಸ್..!

ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿಯುವುದು ಫಿಕ್ಸ್..!

ಬೆಂಗಳೂರು,ಫೆ.24- ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮತ್ತೆ ಸ್ರ್ಪಧಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ ಬೆನ್ನಲ್ಲೇ ಜೆಡಿಎಸ್-ಬಿಜೆಪಿ ಮೈತ್ರಿಗೆ ಠಕ್ಕರ್ ನೀಡುವ ಬೆಳವಣಿಗೆಗಳು ಕಂಡುಬರುತ್ತಿವೆ.
ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಜೆಡಿಎಸ್‍ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಬಳಿಕ ಮಂಡ್ಯ ಸೇರಿದಂತೆ 3 ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲಾಗುತ್ತದೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸುಮಲತಾ ಅಂಬರೀಶ್, ತಾವು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸುವುದಾಗಿ ಹೇಳಿದ್ದಾರೆ.

ಜೆಡಿಎಸ್-ಬಿಜೆಪಿ ನಡುವೆ ಸ್ಥಾನ ಹೊಂದಾಣಿಕೆಯ ಬಗ್ಗೆ ಕೇಳಿಬರುತ್ತಿರುವ ಚರ್ಚೆಗಳು ಯಾವುದೂ ಖಚಿತವಾಗಿಲ್ಲ. ಎಲ್ಲವೂ ಅಂತೆಕಂತೆ ಸ್ವರೂಪದಲ್ಲಿವೆ. ಅಕೃತ ಘೋಷಣೆವರೆಗೂ ಎಲ್ಲವೂ ವದಂತಿಗಳು ಮಾತ್ರಎಂದಿದ್ದಾರೆ. ನಾನು ಸ್ರ್ಪಧಿಸಲು ಹಲವು ಆಯ್ಕೆಗಳಿವೆ. ನಾನು ಎಲ್ಲಿ ನಿಲ್ಲಬೇಕು, ಯಾವ ರೂಪದಲ್ಲಿ ಟಿಕೆಟ್ ಪಡೆದುಕೊಳ್ಳಬೇಕು ಎಂಬುದೇ ಆಗಿದ್ದರೆ ಹಲವು ಸುಲಭ ಮಾರ್ಗಗಳಿವೆ. ಆದರೆ ಇಲ್ಲಿ ಪ್ರಮುಖ ಪ್ರಶ್ನೆ ಇರುವುದು ಮಂಡ್ಯದಲ್ಲಿ ಬಿಜೆಪಿ ಬೆಳವಣಿಗೆಗಾಗಿ ಪಕ್ಷವನ್ನು ಪ್ರಭಲವಾಗಿ ಕಟ್ಟಲು ನಾನು ಟಿಕೆಟ್ ಕೇಳುತ್ತಿದ್ದೇನೆ. ನನಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ಕೊನೆ ಕ್ಷಣದವರೆಗೂ ಇರುತ್ತೇನೆ. ಹೈಕಮಾಂಡ್ ಕೂಡ ಮಂಡ್ಯವನ್ನು ಬಿಜೆಪಿಗೆ ಉಳಿಸಿಕೊಡಲಿದೆ ಎಂಬ ವಿಶ್ವಾಸವಿದೆ ಎಂದರು.

ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿಎಂ ಬಳಿ ಹಣವಿಲ್ಲ: ಅನಂತಕುಮಾರ್ ಹೆಗಡೆ

ಈ ನಡುವೆ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದಿದ್ದು, ಚುನಾವಣೆ ಸ್ಪರ್ಧೆ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅಂಬರೀಶ್‍ರವರ ಬೆಂಬಲಿಗ ಶಶಿ, ಕಳೆದ 5 ವರ್ಷಗಳಿಂದ ಮಂಡ್ಯದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಹೈಕಮಾಂಡ್ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್‍ರವರಿಗೇ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.

ಇತ್ತೀಚೆಗೆ ಸುಮಲತಾ ಅಂಬರೀಶ್‍ರವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದಾಗ ನೀಡಿದ ಭರವಸೆ ಪ್ರಕಾರ ಮಂಡ್ಯವನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಳ್ಳಲಿದೆ ಎಂಬ ನಿರೀಕ್ಷೆಗಳಿವೆ ಎಂದು ಹೇಳಿದರು. ಸುಮಲತಾ ಅಂಬರೀಶ್‍ರವರು ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದವರು. ಅವರನ್ನು ರಾಜಕೀಯದಲ್ಲೇ ಉಳಿಸಿಕೊಳ್ಳಬೇಕು ಎಂಬುದು ನಮ್ಮೆಲ್ಲರ ಆಶಾಭಾವನೆ. ಒಂದು ವೇಳೆ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಉಳಿಸಿಕೊಳ್ಳದೇ ಹೋದರೆ ಪ್ಲಾನ್ ಬಿ ಸಿದ್ಧವಿದೆ. ಏನೇ ಆದರೂ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಂತೂ ಇದ್ದೇ ಇರುತ್ತಾರೆ.

ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ 2 ವಿಧೇಯಕಗಳ ಅಂಗೀಕಾರ

ಈ ಹಿಂದೆ 2019 ರಲ್ಲಿ ಸುಮಲತಾ ಅಂಬರೀಶ್‍ರವರಿಗೆ ಯಾವ ಪಕ್ಷವೂ ಟಿಕೆಟ್ ನೀಡಲಿಲ್ಲ. ಪಕ್ಷೇತರವಾಗಿ ಸ್ರ್ಪಸಿದ ಅವರಿಗೆ ಜನ ಬೆಂಬಲ ನೀಡಿ ಗೆಲ್ಲಿಸಿದ್ದಾರೆ. ಈ ಬಾರಿ ಕೂಡ ಜನಬೆಂಬಲ ದೊರೆಯುತ್ತದೆ ಎಂದು ಹೇಳಿದರು.

RELATED ARTICLES

Latest News