Thursday, January 9, 2025
Homeರಾಜ್ಯನಕ್ಸಲರಿಗೆ ಶರಣಾಗತಿಗೆ ಸರ್ಕಾರ ಪ್ಯಾಕೇಜ್‌ ನೀಡುತ್ತಿರುವುದಕ್ಕೆ ಸುನೀಲ್‌ಕುಮಾರ್‌ ವಾಗ್ದಾಳಿ

ನಕ್ಸಲರಿಗೆ ಶರಣಾಗತಿಗೆ ಸರ್ಕಾರ ಪ್ಯಾಕೇಜ್‌ ನೀಡುತ್ತಿರುವುದಕ್ಕೆ ಸುನೀಲ್‌ಕುಮಾರ್‌ ವಾಗ್ದಾಳಿ

Sunil Kumar slams government for offering package to Naxalites to surrender

ಬೆಂಗಳೂರು,ಜ.8– ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್‌ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ಆಗ್ರಹಿಸಿದ್ದಾರೆ.

ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ !

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ?, ಇದರಿಂದ ಪೊಲೀಸರ ಆತಸ್ಥೈರ್ಯ ಏನಾಗಬೇಡ?, ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Latest News