Sunday, May 5, 2024
Homeರಾಷ್ಟ್ರೀಯಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಕೇಜ್ರಿವಾಲ್ ಪತ್ನಿ ಸುನಿತಾ

ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಕೇಜ್ರಿವಾಲ್ ಪತ್ನಿ ಸುನಿತಾ

ನವದೆಹಲಿ,ಏ.25- ದೆಹಲಿ ಮುಖ್ಯಂಮತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಹಿನ್ನಲೆ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಆಪ್ ಅಭ್ಯರ್ಥಿಗಳ ಪರವಾಗಿ ನಾಳೆಯಿಂದ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುನೀತಾ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವುದು ಇದೇ ಮೊದಲು. ಇದಕ್ಕೂ ಮುನ್ನ ಅವರು ರಾಜಕೀಯವಾಗಿ ಎಲ್ಲೂ ಗುರುತಿಸಿಕೊಂಡವರಲ್ಲ.

ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಸುನೀತಾ ಕೇಜ್ರಿವಾಲ್ ಅವರು ವೀಡಿಯೊ ಸಂದೇಶಗಳು ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಮುನ್ನಲೆಗೆ ಬಂದಿದ್ದಾರೆ. ಕೇಜ್ರಿವಾಲ್ ಬಂಧನ ಖಂಡಿಸಿ ದೆಹಲಿಯಲ್ಲಿ ವಿಪಕ್ಷಗಳು ನಡೆಸಿದ ಸಮಾವೇಶದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದರು. ಇತ್ತಿಚೇಗೆ ಛತ್ತಿಸ್‍ಘಡದಲ್ಲಿ ನಡೆದ ಇಂಡಿಯಾ ಒಕ್ಕೂಟದ ಸಭೆಯಲ್ಲಿ ಅವರು ಪಕ್ಷವನ್ನು ಪ್ರತಿನಿಧಿಸಿದ್ದರು.

ಈ ನಡುವೆ ನ್ಯಾಯಾಂಗ ಬಂಧನದಲ್ಲಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಇಡಿ ಈಗ ಅಫಿಡವಿಟ್ ಸಲ್ಲಿಸಿದೆ. 9 ಬಾರಿ ಸಮನ್ಸ್ ನೀಡಿದ್ದರೂ ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಸಹಕರಿಸಲಿಲ್ಲ, ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರು ಈ ಕಾರಣಕ್ಕೆ ಅವರನ್ನು ಬಂಧಿಸುವ ಅನಿವಾರ್ಯತೆ ಸೃಷ್ಟಿಯಾಯಿತು ಎಂದು ಹೇಳಿದೆ.

ಅಕ್ರಮ ಹಣ ವರ್ಗಾವಣೆಯ ಅಪರಾಧದಲ್ಲಿ ತಪ್ಪಿತಸ್ಥನೆಂದು ಸಾಬೀತುಪಡಿಸಲು ಜಾರಿನಿರ್ದೇಶನಾಲಯದ ಬಳಿ ಸಾಕ್ಷ್ಯಗಳಿದೆ. ಕೇಜ್ರಿವಾಲ್ ಅವರನ್ನು ಪ್ರಾಮಾಣಿಕವಾಗಿ ಬಂಧಿಸಲಾಗಿದೆಯೇ ಹೊರತು ಯಾವುದೇ ದುರುದ್ದೇಶ ಅಥವಾ ಬಾಹ್ಯ ಕಾರಣಗಳಿಗಾಗಿ ಅಲ್ಲ ಎಂದಿರುವ ಇಡಿ, ದುರುದ್ದೇಶಪೂರ್ವಕವಾಗಿ ಬಂಧಿಸಿದೆ ಎನ್ನುವ ಆರೋಪ ನಿರಾಕರಿಸಿದೆ. ಈ ಅಂಶಗಳ ಮೇಲೆ ಕೋರ್ಟ್ ಶೀಘ್ರದಲ್ಲಿ ವಿಚಾರಣೆ ನಡೆಸಲಿದೆ.

RELATED ARTICLES

Latest News