Friday, October 11, 2024
Homeಮನರಂಜನೆಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

Superstar Rajinikanth Hospitalized in Chennai;

ಚೆನ್ನೈ, ಅ. 1 (ಪಿಟಿಐ) -ಸೂಪರ್ ಸ್ಟಾರ್ ರಜನಿಕಾಂತ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ತಡರಾತ್ರಿ ಕಾರ್ಪೊರೇಟ್ ಆಸ್ಪತ್ರೆಗೆ ದಾಖಲಾಗಿರುವ ತಮಿಳು ಚಿತ್ರರಂಗದ ಸೂಪರ್ಸ್ಟಾರ್ ರಜನಿಕಾಂತ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಸೂಪರ್ಸ್ಟಾರ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಮತ್ತು ಹಲವಾರು ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತಲೈವರ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಜೀರ್ಣಾಂಗ ಅಸ್ವಸ್ಥತೆಗಾಗಿ ರಜನಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಅವರ ಸ್ಥಿತಿ ಸ್ಥಿರವಾಗಿದೆ.

ಇಂದು ಅವರು ಕ್ಯಾಥ್ ಲ್ಯಾಬ್ನಲ್ಲಿ ಪರೀಕ್ಷೆಗೊಳಪಡಲಿದ್ದಾರೆ. ನಂತರ ಅವರನ್ನು ವಾರ್ಡ್ಗೆ ಸ್ಥಳಾಂತರಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.ಅವರ ಆರೋಗ್ಯ ಸ್ಥಿರವಾಗಿರುವುದರಿಂದ ರಜನಿಕಾಂತ್ ಅವರು ಇಂದು ಸಂಜೆ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಕನ್ನಡಿಗರಾಗಿರುವ ರಜನಿಕಾಂತ್ ಅವರು ಪಂಚಭಾಷಾ ನಟರಾಗಿದ್ದು ದೇಶದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರಿಗೆ ಜಪಾನ್ ಹಾಗೂ ಚೈನಾದಲ್ಲೂ ಅಭಿಮಾನಿಗಳಿದ್ದಾರೆ ಎನ್ನುವುದು ವಿಶೇಷ.

RELATED ARTICLES

Latest News