ಬಿಬಿಸಿ ಸಾಕ್ಷ್ಯ ಚಿತ್ರ ನಿಷೇಧ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

Social Share

ನವದೆಹಲಿ,ಜ.30-ಪ್ರಧಾನಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತು ಬ್ರಿಟಿಷ್ ಸುದ್ದಿಸಂಸ್ಥೆ ಬಿಬಿಸಿ ನಿರ್ಮಿಸಿದ್ದ ಸಾಕ್ಷ್ಯಚಿತ್ರ ನಿಧಿಷೇಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರಿಂಕೋರ್ಟ್ ಸಮ್ಮತಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ, e. ಬಿ.ಪರ್ದಿವಾಲಾ ಅವರನ್ನೊಳಗೊಂಡ ಪೀಠವು ವಕೀಲ ಎಂ.ಎಲ್.ಶರ್ಮಾ ಮತ್ತು ಹಿರಿಯ ವಕೀಲ ಸಿಯು ಸಿಂಗ್ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿಗಳನ್ನು ವಿಚಾರಣೆ ನಡೆಸಲು ಸಮ್ಮತಿಸಿದೆ.

ಭಾರತ: ಮೋದಿ ಪ್ರಶ್ನೆ ಎಂಬ ಸಾಕ್ಷ್ಯ ಚಿತ್ರ ನಿಷೇಧಿಸಿರುವುದು ದುರುದ್ದೇಶಪೂರಿತ, ಅನಿಯಂತ್ರಿತ ಮತ್ತು ಅಸಂವಿಧಾನಿಕ ಎಂದು ವಕೀಲ ಎಂ.ಎಲ್.ಶರ್ಮಾ ವಾದಿಸಿದರು.

ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಕಾಂಗ್ರೆಸ್ ನಾಯಕರು

ಬಿಬಿಸಿ ಸಾಕ್ಷ್ಯಚಿತ್ರದ ಲಿಂಕ್‍ಗಳೊಂದಿಗೆ ಹಿರಿಯ ಪತ್ರಕರ್ತ ಎನ್.ರಾಮ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು ಮಾಡಿದ್ದ ಟ್ವೀಟ್‍ಗಳನ್ನು ತೆಗೆದು ಹಾಕಿರುವ ಕುರಿತು ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆಯೂ ನಡೆದಿದೆ.

ಎನ್.ರಾಮ್ ಮತ್ತು ಪ್ರಶಾಂತ್ ಭೂಷಣ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಯು.ಸಿಂಗ್ ಕೇಂದ್ರ ಸರ್ಕಾರ ತುರ್ತು ಅಧಿಕಾರವನ್ನು ಬಳಸಿಕೊಂಡು ಟ್ವೀಟ್‍ಗಳನ್ನು ಅಳಿಸಿ ಹಾಕಿದೆ. ಅಜ್ಮೀರ್‍ನ ವಿದ್ಯಾರ್ಥಿಗಳು ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಅಡ್ಡಿ ಪಡಿಸಲಾಗಿದೆ ಎಂದು ವಕೀಲರು ಆರೋಪಿಸಿದರು.

ಬೆಂಗಳೂರಿನಲ್ಲೂ ಬಿಬಿಸಿ ವಿವಾದಾತ್ಮಕ ಸಾಕ್ಷ್ಯಚಿತ್ರದ ಪ್ರಸಾರ

ಅರ್ಜಿಗಳನ್ನು ವಿಚಾರಣೆ ನಡೆಸಲು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ ಎಂದು ಮುಖ್ಯನ್ಯಾಯಮೂರ್ತಿಗಳು ಹೇಳಿದರು. ಭಾರತ: ಮೋದಿ ಪ್ರಶ್ನೆ ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರದ ಲಿಂಕ್‍ಗಳನ್ನು ನಿರ್ಬಂಸಲು ಕೇಂದ್ರ ಇತ್ತೀಚೆಗೆ ನಿರ್ಧರಿಸಿದೆ.

ಟ್ವೀಟರ್, ಯುಟ್ಯೂಬ್‍ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕ್ಷ್ಯ ಚಿತ್ರವನ್ನು ನಿಷೇಧಿಸಲಾಗಿದೆ. ಬಿಬಿಸಿ ನಿರ್ಮಿಸಿದ ಸಾಕ್ಷ್ಯ ಚಿತ್ರ ವಸ್ತುನಿಷ್ಠ ಯಿಲ್ಲ, ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಆಕ್ಷೇಪಿಸಿತ್ತು.

Supreme Court, agrees, hear, PIL, challenging, ban, BBC, documentary,

Articles You Might Like

Share This Article