ನವದೆಹಲಿ, ಮೇ 26- ಭಾನುವಾರ ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್ ಭವನವನ್ನು ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಾರ್ಪಣೆಮಾಡಲು ಲೋಕಸಭೆಯ ಕಾರ್ಯದರ್ಶಿಗೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನೀವು ಅಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ ಎಂಬುದು ನಮಗೆ ತಿಳಿದಿದೆ. ಇದನ್ನು ಪರಿಗಣಿಸಲು ನಾವು ಒಪ್ಪುವುದಿಲ್ಲ. ನಾವು ನಿಮ್ಮ ಮೇಲೆ ದಂಡವನ್ನು ವಿಧಿಸುತ್ತಿಲ್ಲ ಎಂಬುದಕ್ಕೆ ಕೃತಜ್ಞರಾಗಿರಿ ಎಂದು ಎಂದು ಸುಪ್ರೀಂ ಕೋರ್ಟ್ ಪೀಠವು ತುಸು ಅಸಮಾಧಾನದಿಂದಲೇ ಹೇಳಿತು.
ಅಧ್ಯಕ್ಷರನ್ನು ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸದೆ ಕೇಂದ್ರ ಸರ್ಕಾರ ಅವರನ್ನು ಅವಮಾನಿಸುತ್ತಿದೆ ಎಂದು ಅರ್ಜಿದಾರರು ಹೇಳಿದ್ದಾರೆ.
ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ವಿಸರ್ಜನೆ ಮಾಡಬೇಕಾಗುತ್ತೆದೆ : ಹೆಚ್‌ಡಿಕೆ
ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆ ನೇರವೇರುತ್ತಿದ್ದು, ಇದು ಭಾರೀ ವಿವಾದವನ್ನು ಸೃಷ್ಟಿಸಿದೆ. ಪ್ರಧಾನಿ ಬದಲಿಗೆ ರಾಷ್ಟ್ರಪತಿ ಉದ್ಘಾಟನೆ ಮಾಡಬೇಕು. ಇದಕ್ಕಾಗಿ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
ರಾಷ್ಟ್ರಪತಿಯವರನ್ನು ಕಡೆಗಣಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆ ಮಾಡುತ್ತಿರುವುದನ್ನು ಪ್ರತಿಭಟಿಸಿ ಸುಮಾರು 20 ವಿರೋಧ ಪಕ್ಷಗಳು ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ.
ಇಂದಿರಾ ಕ್ಯಾಂಟಿನ್‍ಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಬುಧವಾರದ ಜಂಟಿ ಹೇಳಿಕೆಯಲ್ಲಿ 19 ರಾಜಕೀಯ ಪಕ್ಷಗಳು, ಪ್ರಜಾಪ್ರಭುತ್ವದ ಆತ್ಮವು ಸಂಸತ್ತಿನಿಂದ ಹೊರಹಾಕಲ್ಪಟ್ಟಾಗ, ಹೊಸ ಕಟ್ಟಡದಲ್ಲಿ ಯಾವುದೇ ಮೌಲ್ಯವನ್ನು ಕಾಣುವುದಿಲ್ಲ ಎಂದು ಆರೋಪಿಸಿವೆ.
SupremeCourt, #dismisses, #plea, #President, #DroupadiMurmu, #inaugurate, #newparliamentbuilding,