Thursday, June 1, 2023
Homeಇದೀಗ ಬಂದ ಸುದ್ದಿಎಎಪಿ ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಎಎಪಿ ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

- Advertisement -

ನವದೆಹಲಿ, ಮೇ 26- ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ಹಲವು ತಿಂಗಳಿನಿಂದ ಜೈಲು ಪಾಲಾಗಿದ್ದ ದೆಹಲಿಯ ಮಾಜಿ ಆರೋಗ್ಯ ಸಚಿವ ಮತ್ತು ಎಎಪಿ ನಾಯಕ ಸತ್ಯೇಂದ್ರ ಜೈನ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ನೀಡಿದೆ.

ಗುರುವಾರವಷ್ಟೇ ತಿಹಾರ್ ಜೈಲಿನ ಶೌಚಾಲಯದಲ್ಲಿ ಆಯಾತಪ್ಪಿ ಬಿದ್ದಿದ್ದರಿಂದ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು.

ಅರ್ಜಿ ವಿವಾರಣೆ ನಡೆಸಿದ ನ್ಯಾಯಾಲಯ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದೇ ವೇಳೆ ಅವರಿಗೆ ಸತ್ಯೇಂದ್ರ ಜೈನ್ ಅವರು ಅನುಮತಿಯಿಲ್ಲದೆ ದೆಹಲಿಯಿಂದ ಹೊರಬರುವಂತಿಲ್ಲ ಮತ್ತು ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ.

ಅಪಹರಣಕ್ಕೊಳಗಾಗಿದ್ದ ಬಾಲಕಿ 17 ವರ್ಷದ ನಂತರ ಪತ್ತೆ

ವೈದ್ಯಕೀಯ ಆಧಾರದ ಮೇಲೆ ಮಧ್ಯಂತರ ಜಾಮೀನನ್ನು ಮಂಜೂರು ಮಾಡಲು ತೀರ್ಮಾನಿಸಿದ್ದೇವೆ. ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಆರು ವಾರಗಳ ಅವಕಾಶವನ್ನು ನೀಡುತ್ತೇವೆ. ವಿಚಾರಣಾ ನ್ಯಾಯಾಲಯವು ವಿಧಿಸಿದ ಷರತ್ತುಗಳ ಮೇಲೆ ವೈದ್ಯಕೀಯ ಆಧಾರದ ಮೇಲೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುತ್ತಿದೆ. ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಅಥವಾ ಭೇಟಿಯಾಗಬಾರದು ಎಂದು ನ್ಯಾಯಾಲಯ ಹೇಳಿದೆ.

ಉಸಿರಾಟದ ತೊಂದರೆಯಿಂದ ಜೈನ್ ಅವರನ್ನು ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ್ (ಎಲ್‍ಎನ್‍ಜೆಪಿ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ವರ್ಷ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದಾಗಿನಿಂದ ಅವರು ತಿಹಾರ್ ಜೈಲಿನಲ್ಲಿದ್ದರು.

ಸಮವಸ್ತ್ರ ನಿರ್ಧರಿಸುವ ಹಕ್ಕು ಶಾಲೆಗಳಿಗಿದೆ : ಕೇರಳ ರಾಜ್ಯಪಾಲ

ದೆಹಲಿಯ ಆರೋಗ್ಯ ಸಚಿವರಾಗಿದ್ದ ಸತ್ಯೇಂದ್ರ ಜೈನ್ ಅವರನ್ನು ಆಕ್ರಮ ಹಣದ ವಾಹಿವಾಟು ನಡೆಸಿದ ಆರೋಪದ ಹಿನ್ನಲೆಯಲ್ಲಿ ಕಳೆದ ವರ್ಷ ಮೇ ತಿಂಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶೆಲ್ ಕಂಪನಿಗಳ ಮೂಲಕ ಅಕ್ರಮ ಹಣದಿಂದ ಭೂಮಿ ಖರೀದಿಸಿದ ಆರೋಪದಲ್ಲಿ ಬಂಧಿಸಿತ್ತು. ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿ ಇವೆಲ್ಲವೂ ರಾಜಕೀಯ ಪ್ರೇರಿತ ಎಂದು ಹೇಳಿದ್ದರು.

#SupremeCourt, #grants, #interimbail, #SatyendarJain, #medicalgrounds,

- Advertisement -
RELATED ARTICLES
- Advertisment -

Most Popular