10 ವರ್ಷಗಳ ಬಳಿಕ ಕರ್ನಾಟಕದ ಕಬ್ಬಿಣ ಅದಿರು ರಫ್ತಿಗೆ ಸುಪ್ರೀಂ ಅನುಮತಿ

ನವದೆಹಲಿ, ಮೇ 20- ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಗಣಿಗಳಿಂದ ಅಗೆದ ಕಬ್ಬಿಣದ ಅದಿರನ್ನು ರಫ್ತು ಮಾಡಲು ಗಣಿಗಾರಿಕೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ಕೇಂದ್ರ ಸರ್ಕಾರದ ನಿಲುವನ್ನು ಗಮನಿಸಿ ಕಬ್ಬಿಣದ ಅದಿರು ರಫ್ತು ಮೇಲಿನ ನಿರ್ಬಂಧವನ್ನು ತೆಗೆದುಹಾಕಿದೆ.

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಅಗೆದ ಕಬ್ಬಿಣದ ಅದಿರಿನ ದಾಸ್ತಾನು ಇತ್ಯಾದಿಗಳನ್ನು ಮಾರಾಟ ಮಾಡಲು ನಾವು ಮೇಲ್ಮನವಿದಾರರಿಗೆ ಅನುಮತಿ ನೀಡುತ್ತೇವೆ ಮತ್ತು ಇ-ಹರಾಜನ್ನು ಆಶ್ರಯಿಸದೆ ನೇರ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಕಬ್ಬಿಣದ ಅದಿರನ್ನು ಹಂಚಿಕೆ ಮಾಡಲು ಅನುಮತಿ ನೀಡುತ್ತೇವೆ.

ಕರ್ನಾಟಕದಲ್ಲಿ ಉತ್ಪಾದಿಸಲಾದ ಕಬ್ಬಿಣದ ಅದಿರನ್ನು ವಿದೇಶಗಳಿಗೆ ಕೇಂದ್ರ ಸರ್ಕಾರದ ನೀತಿಗಳ ಪ್ರಕಾರ ರಫ್ತು ಮಾಡಲು ಅನುಮತಿ ನೀಡಲಾಗುವುದು. ಆದರೆ ಈ ವೇಳೆ ಅಕಾರಿಗಳು ವಿಸಿರುವ ಷರತ್ತುಗಳನ್ನು ಗಣಿ ಕಂಪೆನಿಗಳು ಪಾಲಿಸಬೇಕು ಎಂದು ಸೂಚನೆ ನೀಡಿದೆ.

ಕರ್ನಾಟಕದಿಂದ ಕಬ್ಬಿಣದ ಅದಿರು ರಫ್ತು ಮಾಡುವುದನ್ನು ಸುಪ್ರೀಂ ಕೋರ್ಟ್ 2012 ರಲ್ಲಿ ನಿಷೇಸಿತು. ಪರಿಸರ ಅವನತಿಯನ್ನು ತಡೆಗಟ್ಟುವ ಉದ್ದೇಶದಿಂದ ಮತ್ತು ರಾಜ್ಯದ ಖನಿಜ ಸಂಪನ್ಮೂಲಗಳನ್ನು ಭವಿಷ್ಯದ ಪೀಳಿಗೆಗೆ ಉಳಿಸುವ ಉದ್ದೇಶದಿಂದ ರಫ್ತಿಗೆ ನಿಷೇಧ ಹೇರಲಾಗಿತ್ತು.

ಕಬ್ಬಿಣದ ಅದಿರಿನ ಮಾರಾಟ ಮತ್ತು ರಫ್ತಿನ ಮೇಲಿನ ನಿರ್ಬಂಧಗಳನ್ನು ಮಿತಿಮೀರಿ ಉಲ್ಲಂಘಿಸಿದ್ದರಿಂದ ನಿರ್ಬಂಧ ಜಾರಿಗೊಳಿಸಲಾಗಿತ್ತು, ಇದನ್ನು ತೆರವು ಮಾಡುವಂತೆ ಹಲವು ಗಣಿ ಕಂಪೆನಿಗಳು ಮೇಲ್ಮನವಿ ಸಲ್ಲಿಸಿದ್ದವು.