ಹಿಜಾಬ್ ವಿವಾದ ವಿಚಾರಣೆಗೆ ಸುಪ್ರೀಂ ತ್ರಿಸದಸ್ಯ ಪೀಠ ರಚನೆ

Social Share

ನವದೆಹಲಿ,ಜ.23- ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿದ್ದ ಹಿಜಾಬ್ ಕುರಿತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡಲು ಸಮ್ಮತಿಸಿದೆ. ಇದಕ್ಕಾಗಿ ಶೀಘ್ರವೇ ದಿನಾಂಕ ನಿಗದಿಪಡಿಸಲಾಗುವುದು. ಕೋರ್ಟ್ ರಿಜಿಸ್ಟ್ರಾರ್ ಮುಂದೆ ವಿಷಯ ಪ್ರಸ್ತಾಪಿಸಲು ಉಭಯ ವಕೀಲರಿಗೆ ಸೂಚಿಸಿದೆ.

ಫೆಬ್ರವರಿ 6 ರಿಂದ ರಾಜ್ಯದಲ್ಲಿ ಕೆಲವು ತರಗತಿಗಳಿಗೆ ನಿಗದಿಯಾಗಿರುವ ಪ್ರಾಯೋಗಿಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಆದೇಶದ ಅಗತ್ಯವಿದೆ ಎಂದು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಅವರ ಸಲ್ಲಿಕೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ವಿ.ರಾಮಸುಬ್ರಮಣಿಯನ್ ಮತ್ತು ಜೆಬಿ ಪಾರ್ದಿವಾಲಾ ಅವರನ್ನೊಳಗೊಂಡ ಪೀಠ ಗಮನಿಸಿತು.

ಕಳೆದ ವರ್ಷ ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‍ನ ದ್ವಿಸದಸ್ಯ ಪೀಠ ಭಿನ್ನಮತದ ತೀರ್ಪು ನೀಡಿತ್ತು. ಇದೀಗ ಸಾಂವಿಧಾನಿಕ ಪೀಠದ ಮುಂದೆ ಮರು ವಿಚಾರಣೆ ನಡೆಯಲಿದೆ. ಇದು ಮುಸ್ಲಿಂ ವಿದ್ಯಾರ್ಥಿನಿಯರು ತಲೆಗೆ ಧರಿಸುವ ಸ್ಕಾರ್ಫ್ ಬಟ್ಟೆಯ ವಿಚಾರವಾಗಿದೆ. ನಾನು ಈ ಬಗ್ಗೆ ಪರಿಶೀಲಿಸುತ್ತೇನೆ. ಇದು ತ್ರಿಸದಸ್ಯ ಪೀಠದ ವಿಷಯವಾಗಿದೆ. ವಿಚಾರಣೆಗೆ ದಿನಾಂಕವನ್ನು ನಿಗದಿಪಡಿಸುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.

ಹೆಂಡತಿ-ಮಕ್ಕಳನ್ನು ಕೊಂದು ಹೂತಿಟ್ಟ ಪತಿ, 2 ತಿಂಗಳ ನಂತರ ಪ್ರಕರಣ ಬೆಳಕಿಗೆ

ಹಿಜಾಬ್ ತೀರ್ಪು: ಸುಪ್ರೀಂ ಕೋರ್ಟ್‍ನ ಇಬ್ಬರು ನ್ಯಾಯಾೀಧಿಶರ ಪೀಠವು ಕಳೆದ ವರ್ಷ ಅಕ್ಟೋಬರ್ 13ರಂದು ಹಿಜಾಬ್ ವಿವಾದದಲ್ಲಿ ವಿರುದ್ಧ ತೀರ್ಪುಗಳನ್ನು ನೀಡಿತ್ತು. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ನಿವೃತ್ತರಾದ ನಂತರ ಮಾರ್ಚ್ 15 ರಂದು ಕರ್ನಾಟಕ ಹೈಕೋರ್ಟ್ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿಗಳನ್ನು ವಜಾಗೊಳಿಸಿದ್ದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಶಾಲೆ ಮತ್ತು ಕಾಲೇಜುಗಳಲ್ಲಿ ಎಲ್ಲಿಯೂ ಹಿಜಾಬ್ ಧರಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದ್ದರು.

ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಮಿಠಾಯಿ

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಸಿದ ಕರ್ನಾಟಕ ಸರ್ಕಾರ ಕಳೆದ ವರ್ಷ ಫೆಬ್ರವರಿ 5ರಂದು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಎತ್ತಿಹಿಡಿದಿತ್ತು. 10 ದಿನಗಳ ವಿಚಾರಣೆ ಬಳಿಕ ಅದು, ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಗುರುತುಗಳನ್ನು ಧರಿಸುವುದು ಸರಿಯಲ್ಲ ಎಂದು ಹೇಳಿತ್ತು. ಅದರ ವಿರುದ್ಧ ಸುಪ್ರೀಂಕೋರ್ಟ್‍ಗೆ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು.

Supreme Court, Set Up, 3-Judge Bench, Karnataka, Hijab Ban, Case,

Articles You Might Like

Share This Article