Friday, November 22, 2024
Homeರಾಷ್ಟ್ರೀಯ | Nationalಕಲ್ಕತ್ತಾ ಹೈಕೋರ್ಟ್ ಏಕಪೀಠ ಸದಸ್ಯ ಪೀಠದ ತೀರ್ಪಿಗೆ ಸುಪ್ರೀಂ ತಡೆ

ಕಲ್ಕತ್ತಾ ಹೈಕೋರ್ಟ್ ಏಕಪೀಠ ಸದಸ್ಯ ಪೀಠದ ತೀರ್ಪಿಗೆ ಸುಪ್ರೀಂ ತಡೆ

ನವದೆಹಲಿ,ಜ.27- ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ಪ್ರವೇಶಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಅವರ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಅಭೂತಪೂರ್ವ ನಿದರ್ಶನದಲ್ಲಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ತಮ್ಮ ಸಹೋದ್ಯೋಗಿ, ವೈದ್ಯಕೀಯ ಪ್ರವೇಶ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಏಕಸದಸ್ಯ ನ್ಯಾಯಾೀಧಿಶರ ಆದೇಶವನ್ನು ತಡೆಹಿಡಿದ ವಿಭಾಗೀಯ ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಸೌಮೆನ್ ಸೇನ್ ಅವರು ರಾಜಕೀಯ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಇಂದು ವಿಚಾರಣೆ ನಡೆಸಿತು. ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿದ್ದ ಏಕಸದಸ್ಯ ಪೀಠವು ನ್ಯಾಯಮೂರ್ತಿಗಳಾದ ಸೌಮೆನ್ ಸೇನ್ ಮತ್ತು ಉದಯ್ ಕುಮಾರ್ ಅವರ ವಿಭಾಗೀಯ ಪೀಠ ನೀಡಿದ ಆದೇಶವು ಸಂಪೂರ್ಣ ಕಾನೂನುಬಾಹಿರ ಮತ್ತು ನಿರ್ಲಕ್ಷಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಜನರ ಗಮನ ಬೇರೆಡೆ ತಿರುಗಿಸುತ್ತದೆ ಕೇಂದ್ರ ಸರ್ಕಾರ : ಜೈರಾಮ್

ಸರ್ಕಾರದ ಲೆಕ್ಕ ಪರಿಶೋಧಕ ಸಿಎಜಿಯನ್ನು ನೇಮಿಸುವ ಕಾರ್ಯವಿಧಾನವನ್ನು ಪ್ರಶ್ನಿಸುವ ಮನವಿಗೆ ಕೇಂದ್ರದ ಪ್ರತಿಕ್ರಿಯೆಯನ್ನು ಕೋರಲಾಗಿದೆ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಮೀಸಲಾತಿ ವರ್ಗದ ಅಭ್ಯರ್ಥಿಗಳ ದಾಖಲಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಎಂಬಿಬಿಎಸ್ ಅಭ್ಯರ್ಥಿ ಇತಿಶಾ ಸೊರೆನ್ ಸಲ್ಲಿಸಿದ್ದ ಮನವಿಯ ಮೇಲೆ ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದು ಹೇಳುವ ಮೂಲಕ ಏಕ ಸದಸ್ಯ ಪೀಠವು ಆರಂಭದಲ್ಲಿ ಸಿಬಿಐ ತನಿಖೆಗೆ ಆದೇಶಿಸಿತ್ತು.

RELATED ARTICLES

Latest News