RSS ಪಥಸಂಚಲನ ವಿವಾದ ಸುಪ್ರೀಂ ಸಮ್ಮತಿ

Social Share

ನವದೆಹಲಿ,ಮಾ.1- ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನಕ್ಕೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಮೇಲ್ಮನ ವಿಯನ್ನು ಮಾರ್ಚ್ 3ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

ತಮಿಳುನಾಡಿನಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಸರ್ಕಾರ ಅನುಮತಿ ನಿರಾಕರಿಸಿತ್ತು. ಒಳಾಂಗಣದಲ್ಲಿ ಪಥ ಸಂಚಲನ ನಡೆಸುವಂತೆ ಸರ್ಕಾರ ಷರತ್ತು ವಿಸಿತ್ತು. ಆದರೆ ಅದನ್ನು ಒಪ್ಪದ ಸಂಘ ಪರಿವಾರ ಹೈಕೋರ್ಟ್ಗೆ ಮನವಿ ಸಲ್ಲಿಸಿತ್ತು.

ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್, ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಪ್ರತಿಭಟನೆಗಳು ಅತ್ಯಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಫೆಬ್ರವರಿ 10ರಂದು ತೀರ್ಪು ನೀಡಿತ್ತು. ಅದರ ಪ್ರಕಾರ ಪಥಸಂಚಲನಕ್ಕೆ ಅನುಮತಿ ದೊರೆತಿದೆ. ಮಾರ್ಚ್ 5 ರಿಂದ ಪಾದಯಾತ್ರೆ ಆರಂಭವಾಗಲಿದೆ.

ಮದ್ರಾಸ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಯ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಿಕೊಂಡರು.

ನಾಳೆಯೇ ವಿಚಾರಣೆ ನಡೆಸುವಂತೆ ವಕೀಲರು ಮಾಡಿದ ಮನವಿ ಪ್ರತಿಕ್ರಿಯಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠ, ಶುಕ್ರವಾರ ವಿಚಾರಣೆ ನಡೆಸುವುದಾಗಿ ಭರವಸೆ ನೀಡಿದೆ.

#SupremeCourt, #TNGovt. #Appeal, #MadrasHC, #order, #permitting, #RSSmarch,

Articles You Might Like

Share This Article