ಕೊಯಂಬತ್ತೂರು, ಸೆ.9- ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಅನ್ನು ಮೂಲಭೂತ ದಾಖಲೆ ಎಂದು ಪರಿಗಣಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ತಮಿಳುನಾಡಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದೆ ಯುಪಿಎ ಸರ್ಕಾರ ರೂಪಿಸಿದ್ದ ಆಧಾರ್ ಕಾರ್ಡ್ ಭಾರತೀಯ ಪೌರತ್ವ ಗುರುತಿಗೆ ಬಳಸುವ ಪ್ರಮುಖ ದಾಖಲೆಯಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಅದು ಮೂಲಾಧಾರ ಎಂದರು.
ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಆಧಾರ್ ಕಾರ್ಡ್ ಅನ್ನು ಪೌರತ್ವ ದಾಖಲೆ ಎಂದು ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿರುವುದು ಸ್ವಾಗರ್ಹ ಎಂದರು.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇಂಡಿಯಾ ರಾಜಕೀಯ ಕೂಟ ಪ್ರಜಾಪ್ರಭುತ್ವದ ಆಶಯಕ್ಕನುಗುಣವಾಗಿ ಸ್ಪರ್ಧೆ ಮಾಡಿದೆ. ಇಂಡಿಯಾ ಬ್ಲಾಕ್ ನೇತೃತ್ವದಲ್ಲಿ ವಿರೋಧ ಪಕ್ಷಗಳೆಲ್ಲಾ ಒಟ್ಟಾಗಿ ಸ್ಪರ್ಧೆ ಮಾಡಿವೆ. ಎಲ್ಲರಿಗೂ ಆತಸಾಕ್ಷಿಯ ಮತ ಹಾಕುವಂತೆ ಮನವಿ ಮಾಡಿದ್ದೇವೆ ಎಂದರು.ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡಮತದಾನವಾಗುವ ಸಾಧ್ಯತೆಗಳ ಬಗ್ಗೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.