ಕಂಗನಾ ವಿರುದ್ಧ ಅಶ್ಲೀಲ ಪೋಸ್ಟ್ ಮಾಡಿದ್ದ ಸುಪ್ರಿಯಾ ಶ್ರಿನೇಟ್ ವಿರುದ್ಧ ದೂರು

ನವದೆಹಲಿ,ಮಾ.26- ಬಾಲಿವುಡ್ ನಟಿ ಕಂಗನಾ ರಾವತ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್ ಮಾಡಿ ವಿವಾದಕ್ಕೆ ಸಿಲುಕಿರುವ ಎಐಸಿಸಿ ವಕ್ತಾರೆ ಸುಪ್ರಿಯ ಶ್ರಿನೇಟ್ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಇಂತಹ ವರ್ತನೆಯನ್ನು ಹಾಗೂ ಮಹಿಳೆಯರ ಘನತೆಯನ್ನು ಕುಂದಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಕೂಡಲೇ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಎಲ್ಲಾ ಮಹಿಳೆಯರ ಗೌರವ ಹಾಗೂ ಘನತೆಯನ್ನು ಎತ್ತಿಹಿಡಿಯೋಣ ಎಂದು ಆಯೋಗ ತಿಳಿಸಿದೆ. … Continue reading ಕಂಗನಾ ವಿರುದ್ಧ ಅಶ್ಲೀಲ ಪೋಸ್ಟ್ ಮಾಡಿದ್ದ ಸುಪ್ರಿಯಾ ಶ್ರಿನೇಟ್ ವಿರುದ್ಧ ದೂರು