ಹಾಸನ,ಮಾ.27- ರಾಜಕೀಯದಲ್ಲಿ ಪಾರದರ್ಶಕತೆ ಮತ್ತು ಅಭಿವೃದ್ಧಿಯ ಉದ್ದೇಶ ಇರಬೇಕೇ ಹೊರತು, ಕೀಳುಮಟ್ಟದ ತಂತ್ರಗಳಿಗೆ ಮೊರೆ ಹೋಗಬಾರದು ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.ತಾಲೂಕಿನ ಗೊರೂರಿನಲ್ಲಿ ಅವರು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣ ಸಂಬಂಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಎಸ್ಪಿ ವಿರುದ್ಧ ಆಕ್ರೋಶ:
ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯವೈಖರಿಯ ವಿರುದ್ಧವೂ ಗುಡುಗಿದ ಸೂರಜ್ ರೇವಣ್ಣ, ನಾನೊಬ್ಬ ಎಂಎಲ್ಸಿ ಆಗಿದ್ದು, ಖುದ್ದಾಗಿ ಹೋಗಿ ಎಸ್ಪಿಗೆ ಕಂಪ್ಲೇಂಟ್ ಕೊಟ್ಟರೂ ಸ್ವೀಕರಿಸುವುದಿಲ್ಲ. ಒಂದು ದಿನವಾದರೂ ಎಫ್‌ಐಆರ್ ದಾಖಲಿಸುವುದಿಲ್ಲ. ನನಗೇ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ಹಾಸನ ಜಿಲ್ಲೆಯ ಎಸ್ಪಿ ಮಹಮದ್ ಸುಜೇತಾ ಅವರ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ ಅವರು, ಜಿಲ್ಲೆಯಲ್ಲಿ ನ್ಯಾಯ ಒದಗಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆಕ್ಷೇಪಿಸಿದರು. ಇಂತಹ ರಾಜಕೀಯ ತಂತ್ರಗಾರಿಕೆ ಮತ್ತು ವ್ಯವಸ್ಥೆಯ ದುರುಪಯೋಗದಿಂದ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ ಎಂದರು.