Thursday, November 21, 2024
Homeಕ್ರೀಡಾ ಸುದ್ದಿ | Sportsಶೂನ್ಯದಿಂದ ಶತಕ ಬಾರಿಸಿದ ಸರ್ಫ್ ರಾಜ್ ಖಾನ್

ಶೂನ್ಯದಿಂದ ಶತಕ ಬಾರಿಸಿದ ಸರ್ಫ್ ರಾಜ್ ಖಾನ್

Surf Raj Khan scored a century from zero

ಬೆಂಗಳೂರು,ಅ.19- ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಸರ್ಫ್ ರಾಜ್‌ ಖಾನ್ ಅವರು ಶತಕ ಬಾರಿಸಿ ಸಂಭ್ರಮಿಸಿದ್ದಾರೆ.

ಇರಾನಿ ಕಪ್ ಪಂದ್ಯದಲ್ಲಿ ದ್ವಿಶತಕ ಬಾರಿಸಿ ಗಮನ ಸೆಳೆದಿದ್ದ ಖಾನ್ ಇದೀಗ ಅಂತಾರಾಷ್ಟ್ರೀಯ ಪಂದ್ಯದಲ್ಲೂ ಶತಕ ಗಳಿಸಿ ಗಮನ ಸೆಳೆದಿದ್ದಾರೆಮೊದಲ ಇನ್ನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದ ಖಾನ್ ಎರಡನೇ ಇನಿಂಗ್ಸ್ನಲ್ಲಿ ಕೇವಲ 110 ಎಸೆತಗಳಲ್ಲಿ ಸೆಂಚುರಿ ಬಾರಿಸಿದ್ದಾರೆ.

ಅದರಲ್ಲೂ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶೂನ್ಯದ ಜೊತೆಗೆ ಶತಕ ಬಾರಿಸಿದ ಎರಡನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸರ್ಫ್ ರಾಜ್ ಖಾನ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಬರೆದಿದ್ದು ಗಬ್ಬರ್ ಖ್ಯಾತಿಯ ಶಿಖರ್ ಧವನ್ ಅವರ ಹೆಸರಿನಲ್ಲಿತ್ತು. 2014 ರಲ್ಲಿ ಆಕ್ಲೆಂಡ್ ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶಿಖರ್ ಧವನ್ ಮೊದಲ ಇನ್ನಿಂಗ್ಸ್ ನಲ್ಲಿ ಸೊನ್ನೆಗೆ ಔಟಾಗಿದ್ದರು. ಆದರೆ ದ್ವಿತೀಯ ಇನ್ನಿಂಗ್ಸ್ ನಲ್ಲಿ 115 ರನ್ ಬಾರಿಸಿ ಮಿಂಚಿದ್ದರು. ಈ ಮೂಲಕ ಕಿವೀಸ್ ವಿರುದ್ಧ ಶೂನ್ಯದೊಂದಿಗೆ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆ ಪಟ್ಟಿಗೆ ಸರ್ಫ್ ರಾಜ್ ಖಾನ್ ಕೂಡ ಸೇರ್ಪಡೆಯಾಗಿದ್ದಾರೆ. ಈ ಮೂಲಕ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶೂನ್ಯದ ಜೊತೆಗೆ ಶತಕ ಬಾರಿಸಿದ ಟೀಮ್ ಇಂಡಿಯಾದ ಎರಡನೇ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹಾಗೆಯೇ 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 183 ಆಟಗಾರರು ಮಾತ್ರ ಸೊನ್ನೆ ಜೊತೆಗೆ ಶತಕ ಸಿಡಿಸಿದ ಅಪರೂಪದ ದಾಖಲೆ ಹೊಂದಿದ್ದಾರೆ. ಈ ಶೂನ್ಯ-ಶತಕದ ದಾಖಲೆ ಪಟ್ಟಿಯಲ್ಲಿ ಇದೀಗ 183ನೇ ಬ್ಯಾಟರ್ ಆಗಿ ಖಾನ್‌ ಕಾಣಿಸಿಕೊಂಡಿದ್ದಾರೆ.

RELATED ARTICLES

Latest News