Friday, October 3, 2025
Homeರಾಜ್ಯಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅನಿವಾರ್ಯ : ಸಿಎಂ ಸಿದ್ದರಾಮಯ್ಯ

ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅನಿವಾರ್ಯ : ಸಿಎಂ ಸಿದ್ದರಾಮಯ್ಯ

Survey is essential to eliminate inequality: CM Siddaramaiah

ಬೆಂಗಳೂರು, ಅ.1- ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ತಿಳಿದುಕೊಳ್ಳಲು ಸಮೀಕ್ಷೆ ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿ ಕೊಂಡಿದ್ದಾರೆ.

ಇಂದು ಬೆಂಗಳೂರಿನ ಎಂ.ಎಸ್‌‍. ರಾಮಯ್ಯ ಆಸ್ಪತ್ರೆಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರಸಚಿವ ಹೆಚ್‌.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. ಪಾಪ ಅವರಿಗೆ ಗೊತ್ತಿಲ್ಲ, ಸಮಾಜದಲ್ಲಿ ಅಸಮಾನತೆಯಂತೂ ಇದೆ. ಸಮಾನತೆ ನಿರ್ಮಾಣವಾಗಬೇಕು ಎಂಬುದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಆಶಯವಾಗಿದೆ ಎಂದರು.

ಸಮಾನತೆ ನಿರ್ಮಾಣವಾಗಬೇಕಾದರೆ,ಅಸಮಾನತೆ ತೊಲಗಬೇಕು. ಇದಕ್ಕಾಗಿ ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಅದಕ್ಕಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ದತ್ತಾಂಶಗಳ ಅಗತ್ಯವಿದೆ. ಅದನ್ನು ಸಂಗ್ರಹಿಸಲು ಸಮೀಕ್ಷೆ ನಡೆಸುತ್ತಿದ್ದೇವೆ ಎಂದರು.

ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಟವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ ಎಂದ ಅವರು, ಕಾಂಗ್ರೆಸ್‌‍ ವರಿಷ್ಠ ರಾಹುಲ್‌ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲು ಮುಂದಾಗಿದೆ ಎಂದರು.

ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ, ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್‌, ಯಾದಗಿರಿ, ರಾಯಚೂರು, ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ನೆರೆ ಹಾವಳಿಯಾಗಿದೆ ಎಂದರು.ನಮ ಕುಮಾರಸ್ವಾಮಿ ಹೇಳಿಕೆ ಸ್ವಾಗತಾರ್ಹ ರಾಜ್ಯ ಸರ್ಕಾರ ಸಂಘರ್ಷದ ಹಾದಿ ಬಿಟ್ಟು ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಸರ್ಕಾರದಿಂದ ಪರಿಹಾರ ಕೊಡಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ನಮ ಕುಮಾರಸ್ವಾಮಿ ಅವರ ಹೇಳಿಕೆಗೆ ಸ್ವಾಗತಾರ್ಹ. ನಾವು ಕೇಂದ್ರಕ್ಕೆ ಮನವಿ ಸಲ್ಲಿಸುತ್ತೇವೆ. ಪರಿಹಾರ ಕೊಡಿಸಲಿ ಎಂದರು.

ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರ ಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್‌ನ ಬಳಿ ಧಾವಿಸಿ, ಪರಿಹಾರ ತೆಗೆದು ಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಸ್ವಾಗತಾರ್ಹ ಎಂದರು.
ಮೈಸೂರು ದಸರಾ ಆಚರಣೆ ಸಲುವಾಗಿ ಇಂದು ತಾವು ಅಲ್ಲಿಗೆ ತೆರಳುತ್ತಿದ್ದು, ಜಂಬೂ ಸವಾರಿ ಹಾಗೂ ಪಂಜಿನ ಕವಾಯಿತಿನಲ್ಲಿ ಭಾಗವಹಿಸುತ್ತೇನೆ ಎಂದರು.

ಬೆಂಗಳೂರಿನ ಎಂ.ಎಸ್‌‍. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

RELATED ARTICLES

Latest News