ಮುಜರಾಯಿ ದೇವಸ್ಥಾನಗಳ ಸ್ವಚ್ಛ ಮಂದಿರ ಅಭಿಯಾನ

Social Share

ಬೆಂಗಳೂರು,ಫೆ.4- ಭಕ್ತಾದಿಗಳಿಗೆ ದೇವಾಲಯಗಳಲ್ಲಿ ನೈರ್ಮಲ್ಯದ ವಾತಾವರಣ ಮತ್ತು ಸ್ವಚ್ಚ ಪರಿಸರವನ್ನು ನೀಡುವ ಉದ್ದೇಶವನ್ನು ಹೊಂದಿರುವ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಮಂದಿರ ಅಭಿಯಾನ ಉದ್ಘಾಟನೆಗೆ ಸಿದ್ದವಾಗಿದೆ.

ಮುಜರಾಯಿ, ಹಜ್ ಮತ್ತು ವಕ್ ಸಚಿವರಾದ ಶಶಿಕಲಾ ಅ ಜೊಲ್ಲೇ ಅವರ ಆಶಯದ ಯೋಜನೆಯ ಚಾಲನೆಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಫೆ.10 ರಂದು ನಿಮಿಷಾಂಭ ದೇವಸ್ಥಾನದಿಂದ ಉದ್ಘಾಟನೆ ಮಾಡಲಾಗುವುದು ಎಂದು ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು ತನ್ನ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಘನ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹೊಸ ಯೋಜನೆಯನ್ನ ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ.

3 ದಿನ ಸರಕು ಸಾಗಣೆ ವಾಹನಗಳ ಬೆಂಗಳೂರು ಪ್ರವೇಶ ನಿಷೇಧ

ಸ್ವಚ್ಚ ಮಂದಿರ ಅಭಿಯಾನದ ಮೂಲಕ ದೇವಸ್ಥಾನಗಳಲ್ಲಿ ಹಾಗೂ ದೇವಸ್ಥಾನದ ಆವರಣದಲ್ಲಿ ಉತ್ಪತ್ತಿಯಾಗುವ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಸಮಸ್ಯೆಗಳಿಗೆ ಸಂಬಂಧಿಸಿದಂತಹ ಸವಾಲುಗಳಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರಗಳನ್ನು ಒದಗಿಸಲಾಗುವುದು.

ತ್ಯಾಜ್ಯ ಉತ್ಪಾದನೆಯನ್ನು ಕಡಿಮೆ ಮಾಡಲು ವ್ಯವಸ್ಥಿತ ಕ್ರಮಗಳನ್ನು ಹುಟ್ಟುಹಾಕುವುದು ಮತ್ತು ದೇವಾಲಯಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಗ್ರಹಿಸುವುದು, ಸಾಗಿಸುವುದು, ಸಂಸ್ಕರಿಸುವುದು ಮತ್ತು ವಿಲೇವಾರಿ ಮಾಡಲು ಅಗತ್ಯವಾದ ಬೆಂಬಲ ವ್ಯವಸ್ಥೆಗಳೊಂದಿಗೆ ಮೂಲದಲ್ಲಿ ತ್ಯಾಜ್ಯವನ್ನು ಪ್ರತ್ಯೇಕಿಸುವುದು.

ಮತ್ತು ತ್ಯಾಜ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲು ಸೌಲಭ್ಯಗಳನ್ನು ಸ್ಥಾಪಿಸುವ ಮೂಲಕ ದೇವಸ್ಥಾನವನ್ನು ಸುಸ್ಥಿರ ಸಂಸ್ಥೆ ಮತ್ತು ಶೂನ್ಯ ತ್ಯಾಜ್ಯ ಆವರಣವನ್ನಾಗಿ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಉದ್ಘಾಟನೆಯಾಗುವ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು ಹೊಂದಿರುವ ದೇವಸ್ಥಾನಗಳ ಪಟ್ಟಿ

ಕೆಜಿಎಫ್ ಬಾಬು ಮನೆಗೆ ಪೆಟ್ರೋಲ್ ಸುರಿದು ಬೆಂಕಿ

  1. ಶ್ರೀ ನಿಮಿಷಾಂಭ ದೇವಾಲಯ, , ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ
  2. ಶ್ರೀ ಬನಶಂಕರಿ ದೇವಾಲಯ, ಕರಿಯಪ್ಪ ರಸ್ತೆ, ಬೆಂಗಳೂರು ನಗರ ಜಿಲ್ಲೆ
  3. ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ
  4. ಶ್ರೀ ರೇವಣ ಸಿದ್ಧೇಶ್ವರ ದೇವಾಲಯ, ರಾಮನಗರ ತಾಲ್ಲೂಕು, ರಾಮನಗರ ಜಿಲ್ಲೆ
  5. ಶ್ರೀ ಕಬ್ಬಾಳಮ್ಮ ದೇವಾಲಯ, ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆ
  6. ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ, ರಾಮನಗರ ಜಿಲ್ಲೆ
  7. ಶ್ರೀರಂಗನಾಥಸ್ವಾಮಿ ದೇವಾಲಯ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ
  8. ಶ್ರೀ ಚೆನ್ನಕೇಶವಸ್ವಾಮಿ ದೇವಾಲಯ, ಬೇಲೂರು ತಾಲ್ಲೂಕು, ಹಾಸನ ಜಿಲ್ಲೆ
  9. ಶ್ರೀದುರ್ಗಪರಮೇಶ್ವರಿ ದೇವಾಲಯ, ಮಂದಾರ್ತಿ, ದಕ್ಷಿಣ ಕನ್ನಡ ಜಿಲ್ಲೆ
  10. ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಾಲಯ, ನಾಯಕನಹಟ್ಟಿ, ಚಳ್ಳಕೆರೆ, ಚಿತ್ರದುರ್ಗ ಜಿಲ್ಲೆ
  11. ಶ್ರೀಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ದೇವರಾಯನ ದುರ್ಗ, ತುಮಕೂರು ಜಿಲ್ಲೆ
  12. ಶ್ರೀಪೊಳಲಿ ರಾಜರಾಜೇಶ್ವರಿ ದೇವಾಲಯ, ದಕ್ಷಿಣ ಕನ್ನಡ ಜಿಲ್ಲೆ

Swachh, mandir, abhiyan, Muzrai, Temples,

Articles You Might Like

Share This Article