Sunday, December 1, 2024
Homeರಾಜ್ಯಲಘು ಹೃದಯಾಘಾತದಿಂದ ಆಸ್ಪತ್ರೆ ಸೇರಿದ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ

ಲಘು ಹೃದಯಾಘಾತದಿಂದ ಆಸ್ಪತ್ರೆ ಸೇರಿದ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ

ಬೆಂಗಳೂರು,ಏ.12- ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಲಘು ಹೃದಯಾಘಾತಕ್ಕೆ ಒಳಗಾಗಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಲಘು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವುದಾಗಿ ಶರವಣ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ತಮಗೆ ಸ್ಟಂಟ್ ಅಳವಡಿಸಲಾಗಿದೆ. ಇದೀಗ ಗುಣಮುಖವಾಗಿದ್ದು, ಅಭಿಮಾನಿಗಳು, ಆತ್ಮೀಯರು ಆತಂಕಪಡುವ ಅವಶ್ಯಕತೆಯಿಲ್ಲ. ಎಲ್ಲರ ಪ್ರೀತಿ, ಹಾರೈಕೆ, ಪ್ರಾರ್ಥನೆಯಿಂದ ಹಾಗೂ ಭಗವಂತನ ಕೃಪೆಯಿಂದ ಚೇತರಿಸಿಕೊಳ್ಳುತ್ತಿರುವುದಾಗಿ ಶರವಣ ತಿಳಿಸಿದ್ದಾರೆ.

RELATED ARTICLES

Latest News