Monday, June 17, 2024
Homeರಾಜ್ಯಲೋಕಸಭಾ ಚುನಾವಣೆ ಫಲಿತಾಂಶದಿಂದ ಜೆಡಿಎಸ್‌‍ ಪ್ರಾಬಲ್ಯ ಸಾಬೀತಾಗಿದೆ : ಶರವಣ

ಲೋಕಸಭಾ ಚುನಾವಣೆ ಫಲಿತಾಂಶದಿಂದ ಜೆಡಿಎಸ್‌‍ ಪ್ರಾಬಲ್ಯ ಸಾಬೀತಾಗಿದೆ : ಶರವಣ

ಬೆಂಗಳೂರು,ಜೂ.5- ಪ್ರಸಕ್ತ ಲೋಕಸಭಾ ಚುನಾವಣೆ ಫಲಿತಾಂಶ ಜೆಡಿಎಸ್‌‍ ಮತ್ತೊಮೆ ಬಲಿಷ್ಠ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ ಎಂದು ಜೆಡಿಎಸ್‌‍ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಿ ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ದೇಶದ ಜನತೆ ಮನ್ನಣೆ ನೀಡಿದ್ದಾರೆ. ಸತತ ಮೂರನೇ ಬಾರಿಗೆ ಎನ್‌ಡಿಎ ಗೆಲುವಿನ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿಗೆ ರಾಜ್ಯದ ಜನತೆ ಈ ಚುನಾವಣೆ ಮೂಲಕ ಅಧಿಕೃತ ಮುದ್ರೆ ಒತ್ತಿದ್ದಾರೆ. ಈ ಮೈತ್ರಿ ಒಂದು ಪ್ರಭಲ ರಾಜಕೀಯ ಶಕ್ತಿ ಎನ್ನುವುದು ಸಾಬೀತಾಗಿದೆ, ವಿಶೇಷವಾಗಿ ಇಡೀ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌‍ ಮತ್ತೆ ಪ್ರಾಬಲ್ಯ ಸಾಧಿಸಿ ಬಲಿಷ್ಠ ಪಕ್ಷವಾಗಿ ಹೊರಬಂದಿದೆ.

ಜೆಡಿಎಸ್‌‍ ಪಕ್ಷವನ್ನು ಮುಗಿಸುವ ಸಂಚು ವಿಲವಾಗಿದ್ದು, ಎರಡು ಸ್ಥಾನಗಳಲ್ಲಿ ಗೆದ್ದಿರುವ ಜೆಡಿಎಸ್‌‍ 9 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವಿಗೆ ಸಹಕಾರ ನೀಡಿದೆ.ರಾಷ್ಟ್ರ ರಾಜಕಾರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಶ್ನಾತೀತ ನಾಯಕರಾಗಿ ಹೊರ ಹೊಮಿದ್ದಾರೆ. ಮತ್ತೊಮೆ ಎನ್‌ಡಿಎ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌‍ ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡರೂ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ಗ್ಯಾರಂಟಿ ಯೋಜನೆಗಳು ಫಲ ನೀಡಿಲ್ಲ ಎಂದು ಅವರು ಟೀಕಿಸಿದ್ದಾರೆ.

RELATED ARTICLES

Latest News