ಬ್ಯಾಂಕ್‍ಗಳಾಗಿ ಪರಿವರ್ತನೆಗೊಳ್ಳಲಿವೆ ಅಂಚೆ ಕಚೇರಿಗಳು

ನವದೆಹಲಿ,ಜ.1-ಮುಳುಗುವ ಹಡಗಿನಂತಾಗಿರುವ ಅಂಚೆ ಇಲಾಖೆಗೆ ಮರು ಜೀವ ನೀಡಲು ಕೇಂದ್ರ ಸರ್ಕಾರ ಯೋಜನೆ ಸಿದ್ದಪಡಿಸಿದೆ. ದೇಶದಲ್ಲಿರುವ ಎಲ್ಲಾ ಅಂಚೆ ಕಚೇರಿಗಳಿಗೂ ಬ್ಯಾಂಕ್ ಸ್ವರೂಪ ನೀಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದಾರೆ. ದೇಶದಲ್ಲಿರುವ ಒಂದೂವರೆ ಲಕ್ಷ ಅಂಚೆ ಕಚೇರಿಗಳನ್ನು ಬ್ಯಾಂಕ್‍ಗಳನ್ನಾಗಿ ಪರಿವರ್ತಿಸುವ ಮೂಲಕ ಅಂಚೆ ಇಲಾಖೆಯನ್ನು ಬಲವರ್ಧನೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರ ಜತೆಗೆ 75 ಡಿಜಿಟಲ್ ಬ್ಯಾಂಕ್‍ಗಳನ್ನು ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದ್ದು, ದೇಶದ 75 ಜಿಲ್ಲೆಗಳಲ್ಲಿ ಡಿಜಿಟಲ್ […]

ವರ್ಷಾಂತ್ಯಕ್ಕೆ ಜಿಡಿಪಿ ದರ 9.2ರಷ್ಟು ಹೆಚ್ಚಳ : ನಿರ್ಮಲಾ ಸೀತಾರಾಮನ್

ನವದೆಹಲಿ,ಫೆ.1- ಕೋವಿಡ್ ಸಂಕಷ್ಟದ ನಡುವೆಯೂ ದೇಶದ ಆರ್ಥಿಕ ಪರಿಸ್ಥಿತಿ ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಪ್ರಗತಿಯಾಗುತ್ತಿದ್ದು, ಈ ವರ್ಷದ ಅಂತ್ಯಕ್ಕೆ ಜಿಡಿಪಿ ದರ ಶೇ.9.2ರಷ್ಟು ಹೆಚ್ಚಳವಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಸಂಸತ್‍ನಲ್ಲಿ ಬಜೆಟ್ ಮಂಡಿಸುವ ವೇಳೆ, ಕಳೆದೆರಡು ವರ್ಷಗಳಿಂದ ದೇಶದಲ್ಲಿ ಕೋವಿಡ್-19 ಕಾಣಿಸಿಕೊಂಡು ಆರ್ಥಿಕ ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಇತ್ತೀಚೆಗೆ ನಮ್ಮ ಆರ್ಥಿಕ ಪರಿಸ್ಥಿತಿ ನಿಧಾನವಾಗಿ ಚೇತರಿಕೆಯಾಗುತ್ತಿದ್ದು, ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ರಾಷ್ಟ್ರವಾಗಿದೆ ಎಂದು ಹೇಳಿದರು. ಈಗಿರುವ ಅಂದಾಜಿನಂತೆ ಈ ವರ್ಷದ ಅಂತ್ಯಕ್ಕೆ ಜಿಡಿಪಿ […]