“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನೀಟ್‌ಗೆ ಚರಮಗೀತೆ ಹಾಡುತ್ತವೆ” : ಹೆಚ್‌ಡಿಕೆ

ಬೆಂಗಳೂರು, ಮಾ.3- ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿದ್ಯಾರ್ಥಿಗಳ ಆರ್ಥನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ ಎಂದಿದ್ದಾರೆ. 2023ರಲ್ಲಿ ಜೆಡಿಎಸ್ ಸರಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ. […]