ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ

ಬೆಂಗಳೂರು, ಫೆ.17-ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸಭೆಯಲ್ಲಿಂದ 2023-24ನೇ ಸಾಲಿನ ಮುಂಗಡಪತ್ರ ಮಂಡಿಸಿದ ಅವರು, ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು ಎಂದರು. ಖೈದಿಗಳಿಗೂ ಬಜೆಟ್‍ನಲ್ಲಿ ಗುಡ್ ನ್ಯೂಸ್ […]

ದಿನದ 24 ಗಂಟೆ ಕಾರ್ಯನಿರ್ವಹಿಸುವ ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್

ಬೆಂಗಳೂರು, ಫೆ.17- ಸರ್ಕಾರಿ ವೆಬ್‍ಸೈಟ್‍ಗಳು, ಆನ್-ಲೈನ್ ಸೇವೆಗಳು ಮತ್ತು ದತ್ತಾಂಶಗಳ ಸುರಕ್ಷತೆಗಾಗಿ, ಸೈಬರ್ ತಜ್ಞರು ಮತ್ತು ಆಧುನಿಕ ತಂತ್ರಜ್ಞಾನವನ್ನೊಳಗೊಂಡ ದಿನದ 24 ಗಂಟೆಯೂ ಸೇವೆಯಲ್ಲಿರುವಂತೆ ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆ ವ್ಯಾಪಕವಾಗಿದ್ದು, ಈ ವ್ಯವಸ್ಥೆಯ ಸುರಕ್ಷತೆಯೂ ಅತ್ಯಾದ್ಯತೆಯ ವಿಷಯವಾಗಿರುವ ಹಿನ್ನೆಲೆಯಲ್ಲಿ ಈ ಸೈಬರ್ ಸೆಕ್ಯುರಿಟಿ ಆಪರೇಷನ್ ಸೆಂಟರ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಕೆ-ಸೇಫ್-2 ಯೋಜನೆ […]

ಬೆಂಗಳೂರಲ್ಲಿ ಭುವನೇಶ್ವರಿ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಸ್ಥಾಪನೆ

ಬೆಂಗಳೂರು, ಫೆ. 17- ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸಭೆಯಲ್ಲಿಂದು 2023-24ನೇ ಸಾಲಿನ ಆಯವ್ಯ ಮಂಡಿಸಿದ ಅವರು, ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ ಎಂಬ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ ಮಾಡಲಾಗುವುದು ಎಂದರು. ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು […]

ಜನನಿಬಿಡ ಪ್ರದೇಶಗಳಲ್ಲಿ 250 ಶೀ ಟಾಯ್ಲೆಟ್‍ಗಳ ನಿರ್ಮಾಣ

ಬೆಂಗಳೂರು,ಫೆ.17- ನಿರ್ಭಯ ಯೋಜನೆಯಡಿ ಜಾರಿಗೊಳಿಸಲು ತೀರ್ಮಾನಿಸಿದರುವ ಸೇಫ್ ಸಿಟಿ ಯೋಜನೆ ಕಾಮಗಾರಿಗೆ 261 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಣೆ ನೀಡಿದ್ದಾರೆ. ಸಮಾಜದ ದುರ್ಬಲ ವರ್ಗದವರಲ್ಲಿ ಅದರಲ್ಲೂ ಮಹಿಳೆಯರಲ್ಲಿ ವಿಶ್ವಾಸ ಮೂಡಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ದ ಸೇಫ್ ಸಿಟಿ ಪ್ರಾಜೆಕ್ಟ್ ಅನ್ನು ಸಮರೋಪಾದಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯಡಿ 1640 ಸ್ಥಳಗಳಲ್ಲಿ 4100 ಕ್ಯಾಮರಾಗಳನ್ನು ಈಗಾಗಲೇ ಅಳವಡಿಸಲಾಗಿದೆ. ಈ ಕ್ಯಾಮರಾಗಳನ್ನು ಇಂಟಿಗ್ರೆಟೆಡ್ ಕಂಟ್ರೋಲ್ ಅಂಡ್ ಕಮಾಂಡ್ ಸೆಂಟರ್‍ಗೆ ಸಂಪರ್ಕ ಕಲ್ಪಿಸಿ ಭದ್ರತಾ ಕ್ರಮಗಳ […]

ಬೆಂಗಳೂರು ನಗರಕ್ಕೆ 10 ಸಾವಿರ ಕೋಟಿ ರೂ. ಬಂಪರ್ ಕೊಡುಗೆ

ಬೆಂಗಳೂರು, ಫೆ, 17- ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಿಲಿಕಾನ್ ಸಿಟಿ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್‍ನಲ್ಲಿ ನಗರದ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಗಳ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗಿದೆ. ಅಮೃತ ನಗರೋತ್ಥಾನ ಯೋಜನೆಯಡಿ ನಗರದಲ್ಲಿ 6 ಸಾವಿರ […]

ಬೆಂಗಳೂರಿನಲ್ಲಿ 50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು

ಬೆಂಗಳೂರು, ಫೆ, 17- ನಗರದ 50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ನೆರವಾಗುವ 5550 ಕೋಟಿ ರೂ. ವೆಚ್ಚದ 775 ಎಂಎಲ್‍ಡಿ ಸಾಮಥ್ರ್ಯದ ಎಲ್ಲಾ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಬಜೆಟ್‍ನಲ್ಲಿ ತಿಳಿಸಿದ್ದಾರೆ. ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಎರಡನೆ ಹಂತದ ಯೋಜನೆ ಅನುಷ್ಠಾನಗೊಳಿಸಲು ಜಲಮಂಡಳಿಗೆ 200 ಕೋಟಿ ರೂ.ಗಳ ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿದೆ. ಬಜೆಟ್ ಹೈಲೈಟ್ಸ್ : 116 ನೂತನ […]

ಬಜೆಟ್‍ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ..? ಇಲ್ಲದಿ ಕಂಪ್ಲೀಟ್ ಮಾಹಿತಿ

ಬೆಂಗಳೂರು,ಫೆ.17- ಚುನಾವಣಾ ವರ್ಷದಲ್ಲಿ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಕ್ಷಣ, ನೀರಾವರಿ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಅದರಲ್ಲೂ ಶಿಕ್ಷಣ ಇಲಾಖೆ ಬಜೆಟ್‍ನ ಅನುದಾನ ಹಂಚಿಕೆಯಲ್ಲಿ ಸಿಂಹಪಾಲು ಪಡೆದಿದೆ. ಇತರ ವೆಚ್ಚಗಳ ಗಾತ್ರ ಶೇ.30ರಷ್ಟನ್ನು ದಾಟಿದೆ. ಇನ್ನೂ ಆದಾಯ ಸಂಗ್ರಹದಲ್ಲಿ ಎಂದಿನಂತೆ ವಾಣಿಜ್ಯ ತೆರಿಗೆ ಸಿಂಹಪಾಲು ಹೊಂದಿದೆ. ಮುಂದಿನ ವರ್ಷ 97 ಸಾವಿರ ಕೋಟಿ ರೂಪಾಯಿ ಸಂಗ್ರಹಿಸುವ ಗುರಿ ಇದೆ. ಇದು ಒಟ್ಟು ಆದಾಯದಲ್ಲಿ ಶೇ.59ರಷ್ಟು. ಇನ್ನೂ ಅಬಕಾರಿ ಬಾಬ್ತಿನಿಂದ 35 ಸಾವಿರ […]

ಕೇಂದ್ರ ಬಜೆಟ್-2023 ಹೈಲೈಟ್ಸ್

* ತಲಾ ಆದಾಯವು ಸುಮಾರು ಒಂಬತ್ತು ವರ್ಷಗಳಲ್ಲಿ ದ್ವಿಗುಣಗೊಂಡು 1.97 ಲಕ್ಷ ರೂ.ಗೆ ತಲುಪಿದೆ. * ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಗಾತ್ರದಲ್ಲಿ 10ನೇ ಸ್ಥಾನದಿಂದ 5 ನೇ ಸ್ಥಾನಕ್ಕೆ ಹೆಚ್ಚಳವಾಗಿದೆ. * ಇಪಿಎಫ್ಒ ಸದಸ್ಯತ್ವವು 27 ಕೋಟಿಗೆ ದ್ವಿಗುಣಗೊಂಡಿದೆ. * 2022ರಲ್ಲಿ ಯುಪಿಐ ಮೂಲಕ 126 ಲಕ್ಷ ಕೋಟಿ ರೂ.ಗಳ 7,400 ಕೋಟಿ ಡಿಜಿಟಲ್ ಪಾವತಿಗಳು ನಡೆದಿವೆ. * ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ 11.7 ಕೋಟಿ ಮನೆ ಶೌಚಾಲಯಗಳನ್ನು ನಿರ್ಮಿಸಲಾಗಿದೆ. * ಉಜ್ವಲ […]