ಜಾಹಿರಾತಿನಲ್ಲಿ ಪಂಡಿತ್ ನೆಹರು ಭಾವಚಿತ್ರ ನಾಪತ್ತೆ, ಕಾಂಗ್ರೆಸ್ ತೀವ್ರ ಆಕ್ಷೇಪ
ಬೆಂಗಳೂರು,ಆ.14-ರಾಜ್ಯ ಸರ್ಕಾರದ ವತಿಯಿಂದ ನೀಡಲಾಗಿರುವ ಆಜಾದಿ ಕಾ ಅಮೃತ ಮಹೋತ್ಸವದ ಜಾಹಿರಾತಿನಲ್ಲಿ ಪಂಡಿತ್ ಜವಹಾರ್ ಲಾಲ್ ನೆಹರು ಅವರ ಭಾವಚಿತ್ರ ಕಾಣೆಯಾಗಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಈ ಸಂಬಂಧ ಟ್ವೀಟ್ವೊಂದನ್ನು ಹಂಚಿಕೆಕೊಂಡಿದ್ದು, ನೆಹರು ಅವರು ಇಂತಹ ಸಣ್ಣತನವನ್ನು ಕ್ಷಮಿಸುತ್ತಾರೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಕೆಲಸವನ್ನು ಉಳಿಸಿಕೊಳ್ಳುವುದಕ್ಕಾಗಿ ಹತಾಶರಾಗಿದ್ದು, ಅವರಿಗೆ ತಾವು ಮಾಡಿರುವ ತಪ್ಪು ಅರಿವಾದಂತಿಲ್ಲ ಎಂದಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್. […]
ಹರ್ ಘರ್ ತಿರಂಗ ಅಭಿಯಾನಕ್ಕೆ ರಾಜ್ಯದೆಲ್ಲೆಡೆ ಅದ್ದೂರಿ ಚಾಲನೆ
ಬೆಂಗಳೂರು,ಆ.13-ದೇಶದ ಪ್ರಧಾನಿ ನರೇಂದ್ರ ಮೋದಿ ಅವರು 75ನೇ ಅಮೃತ ಮಹೋತ್ಸವದ ಪ್ರಯುಕ್ತ ಕರೆ ಕೊಟ್ಟಿದ್ದ ಹರ್ ಘರ್ ತಿರಂಗ ಅಭಿಯಾನಕ್ಕೆ ಇಂದು ರಾಜ್ಯದೆಲ್ಲೆಡೆ ಅದ್ದೂರಿಯಾಗಿ ಚಾಲನೆ ಕೊಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಶಾಲಾ ಮಕ್ಕಳು, ಎನ್ಜಿಒಗಳ ಸೇರಿದಂತೆ ಮತ್ತಿತರ ಸಂಘಟನೆಗಳ ಜೊತೆ ಈ ಅಭಿಯಾನಕ್ಕೆ ಚಾಲನೆ ಕೊಟ್ಟರು. ವಿಧಾನಸೌಧ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸ್ಪೀಕರ್ […]