2 ತಿಂಗಳಲ್ಲಿ 1 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ

ಬೆಳಗಾವಿ, ಡಿ.22- ಮುಂದಿನ ಬಜೆಟ್ ಅಧಿವೇಶನದ ವೇಳೆಗೆ ಬರೋಬ್ಬರಿ ಒಂದು ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ವಿಧಾನ ಪರಿಷತ್ತಿಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಸಿ.ಎನ್.ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ರಾಜ್ಯದಲ್ಲಿ ವಿವಿಧ ಇಲಾಖೆಗಳ ವಿವಿಧ ವೃಂದದ 7.60ಲಕ್ಷ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ ಈಗಾಗಲೇ 5.11ಲಕ್ಷ ಹುದ್ದೆಗಳು ಭರ್ತಿಯಾಗಿದವೆ. ಇನ್ನೂ ಉಳಿದ 2.50 ಲಕ್ಷ ಹುದ್ದೆಗಳ ಖಾಲಿ ಇವೆ. ಈ ಹುದ್ದೆಗಳ ಭರ್ತಿ ಪ್ರಕ್ರಿಯೆ ಭಾಗವಾಗಿ […]