ಬಿಜೆಪಿ ಸರ್ಕಾರದ 1 ವರ್ಷದ ಸಾಧನೆ ಕುರಿತು ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು, ಜು.28- ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರ್ಕಾರದ ವರ್ಷದ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ. ಸಾವುಗಳನ್ನೇ ಸಾಧನೆಗಳನ್ನಾಗಿ ಮಾಡಿ ಕೊಂಡು, ಅವುಗಳನ್ನೇ ಅಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞಾ ಕಾಡುತ್ತಿಲ್ಲ ಎನ್ನುವ ಸಮಾಧಾನ, ಸರ್ಕಾರ ಮುಖ ಉಳಿಸಿಕೊಂಡಿದೆ ಎಂದು ಲೇವಡಿ […]