ರಾಜ್ಯದ 10 ಜಿಲ್ಲೆಗಳಲ್ಲಿ ಕೊರೊನಾ ಆರ್ಭಟ ಹೆಚ್ಚಳ

ಬೆಂಗಳೂರು,ಜ.11- ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ರಾಜ್ಯದ 10 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿರುವುದರಿಂದ ಈ ಜಿಲ್ಲೆಗಳನ್ನು ಕೊರೊನಾ ಹಾಟ್‍ಸ್ಪಾಟ್‍ಗಳೆಂದು ಗುರುತಿಸಲಾಗಿದೆ. ಬೆಂಗಳೂರು, ಮಂಡ್ಯ, ಕೊಡಗು, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ಮೈಸೂರು, ಉಡುಪಿ ಹಾಗೂ ಹಾಸನವನ್ನು ಡೇಂಜರ್ ಜಿಲ್ಲೆಗಳೆಂದು ಪರಿಗಣಿಸಲಾಗಿದೆ. ಪಾಸಿಟಿವಿಟಿ ದರ ಶೇ.5ರ ಗಡಿ ದಾಟಿದರೆ ಅಪಾಯ ಎಂಬುದು ತಜ್ಞರ ಅಭಿಮತ. ಇದರಂತೆ ರಾಜಧಾನಿ ಬೆಂಗಳೂರು ಪಾಸಿಟಿವಿಟಿ ದರ ಶೇ.12.79 ರಷ್ಟಿದ್ದು ಪ್ರಥಮ ಸ್ಥಾನದಲ್ಲಿದೆ. ಮಂಡ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.56ರಷ್ಟಿದ್ದು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಉಳಿದಂತೆ […]