ದಸರಾ ವೇಳೆಗೆ ಸಂಚಾರಕ್ಕೆ ಮುಕ್ತವಾಗಲಿದೆ ಬೆಂಗಳೂರು-ಮೈಸೂರು ದಶಪಥ ರಸ್ತೆ

ಬೆಂಗಳೂರು,ಜ.18-ಮೈಸೂರು-ಬೆಂಗಳೂರು ದಶಪಥ ರಸ್ತೆ ಮುಂಬರುವ ದಸರಾ ವೇಳೆಗೆ ಸಂಚಾರಕ್ಕೆ ಮುಕ್ತವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಅಂದಾಜು 8000 ಕೋಟಿ ರೂ. ವೆಚ್ಚದ ಯೋಜನೆ ಕಾಮಗಾರಿ ಭರದಿಂದ ಸಾಗಿದೆ. ಹೆಚ್.ಸಿ.ಮಹದೇವಪ್ಪ ಲೋಕೋಪಯೋಗಿ ಸಚಿವರಾಗಿದ್ದ ಕಾಲದಲ್ಲಿ ಸುಮಾರು 117 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಈ ಯೋಜನೆ ಕೇಂದ್ರದಿಂದ ಮಂಜೂರಾಗಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಕೆಲಕಾಲ ಯೋಜನೆಯ ಕಾಮಗಾರಿ ವಿಳಂಬವಾದರೂ ರಾಜ್ಯ ಸರ್ಕಾರದ ಒತ್ತಡದ ಹಿನ್ನೆಲೆಯಲ್ಲಿ ಕಾಮಗಾರಿ ಕಾರ್ಯ ಚುರುಕುಗತಿಯಿಂದ ನಡೆಯುತ್ತಿದ್ದು, ದಸರಾ ಮಹೋತ್ಸವದ ಸಂದರ್ಭದಲ್ಲಿ ಲೋಕಾರ್ಪಣೆ […]