ರಾಜ್ಯದ 5 ಮಹಾನಗರಗಳಲ್ಲಿ 1000 SC-ST ವಿದ್ಯಾರ್ಥಿ ನಿಲಯ ನಿರ್ಮಾಣ

ಬೆಂಗಳೂರು,ಸೆ.25- ರಾಜ್ಯದ ಐದು ಮಹಾನಗರಗಳಲ್ಲಿ 1000 ಎಸ್ಸಿ-ಎಸ್ಟಿ ವಿದ್ಯಾರ್ಥಿ ನಿಲಯಗಳನ್ನು ನಿರ್ಮಾಣ ಮಾಡಲಿದ್ದು, ಹಾಸ್ಟೆಲ್‍ಗೆ ಪಂಡಿತ್ ದೀನ ದಯಾಳ್ ಉಪಾಧ್ಯಾಯರ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ನಂ.9ರ ವಿರೂಪಾಕ್ಷಪುರದಲ್ಲಿರುವ ಉದ್ಯಾನವನಕ್ಕೆ ಪಂಡಿತ್ ದೀನ ದಯಾಳ್ ಉಪಾಧ್ಯಾಯರ ಉದ್ಯಾನವನ ಎಂದು ನಾಮಕರಣ ಮಾಡುವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಯವ್ಯಯದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ಹಣ ಒದಗಿಸಲಾಗಿದ್ದು, ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು ಹಾಗೂ ಬೆಳಗಾವಿಯಲ್ಲಿ ಒಂದು […]