ಜೆಡಿಎಸ್ ಅಧಿಕಾರಕ್ಕೆ ಬಂದರೆ ಬಯಲುಸೀಮೆಗೆ 1000 ಕೋಟಿ ಅನುದಾನ : ಹೆಚ್‌ಡಿಕೆ

ಕೊರಟಗೆರೆ,ಡಿ.4- ಬಯಲುಸೀಮೆ ಜಿಲ್ಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 1000 ಕೋಟಿ ರೂ. ಕ್ರಿಯಾಯೋಜನೆ ರೂಪಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು. ತೋವಿನಕೆರೆ ಗ್ರಾಮದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಬೆಂಗಳೂರಿಗೆ ಸಮೀಪ ಇರುವ ಪ್ರದೇಶಗಳೇ ಅಭಿವೃದ್ಧಿಯಾಗಿಲ್ಲ. ಗಡಿ ಪ್ರದೇಶಗಳ ಪರಿಸ್ಥಿತಿ ಇನ್ನೂ ಶೋಚನೀಯ, ಮಧುಗಿರಿ, ಪಾವಗಡ, ಕೊರಟಗೆರೆ ತಾಲ್ಲೂಕು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿವೆ. ಅಭಿವೃದ್ಧಿಯಲ್ಲಿ ಅಸಮಾನತೆ ಎದ್ದು ಕಾಣುತ್ತಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಪ್ರದೇಶಗಳ ಸಮಗ್ರ ಕಾಯಕಲ್ಪ ಯೋಜನೆ ರೂಪಿಸುತ್ತೇವೆ ಎಂದರು. […]