ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಯಶಸ್ವಿಗೆ ಒಕ್ಕಲಿಗರ ಸಂಘ ಮನವಿ

ಬೆಂಗಳೂರು, ಅ.21-ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆ ಸಮಾರಂಭದಲ್ಲಿ ನಮ್ಮ ಸಮಾಜದವರು, ವಿವಿಧ ಸಂಘಟನೆಗಳು ಸೇರಿದಂತೆ ನಾಡಿನ ಸಮಸ್ತರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ರಾಜ್ಯ ಒಕ್ಕಲಿಗರ ಸಂಘ ಮನವಿ ಮಾಡಿದೆ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವುದು ಎಲ್ಲರೂ ಹೆಮ್ಮೆಪಡುವ ಸಂಗತಿಯಾಗಿದೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ನಾಡಪ್ರಭುಗೆ ಗೌರವ ಸಲ್ಲಿಸುವ ಸದಾವಕಾಶ ದೊರೆತಿದೆ ಎಂದು ಸಂಘದ ಅಧ್ಯಕ್ಷರಾದ ಶಾಸಕ ಸಿ.ಎನ್.ಬಾಲಕೃಷ್ಣ […]