ಪ್ರವೀಣ್ ಕುಟುಂಬಕ್ಕೆ ಬಾಲಿವುಡ್ ನಿರ್ಮಾಪಕ ಮುನೀಶ್ ಮುಂದ್ರ 11 ಲಕ್ಷ ಪರಿಹಾರ

ದಕ್ಷಿಣ ಕನ್ನಡ,ಆ.6- ಹತ್ಯೆಯಾದ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಾಲಿವುಡ್ ಚಿತ್ರ ನಿರ್ಮಾಪಕ ಮುನೀಶ್ ಮುಂದ್ರ 11 ಲಕ್ಷ ಪರಿಹಾರ ನೀಡಿದ್ದಾರೆ. ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿರುವ ಉದ್ಯಮಿ ಹಾಗು ಬಾಲಿವುಡ್ ಚಿತ್ರ ನಿರ್ಮಾಪಕ ಮುನೀಶ್ ಮುಂದ್ರ ಮೃತರ ಕುಟುಂಬಕ್ಕೆ ಸ್ವಾಂತ್ವಾನ ಹೇಳಿ 11 ಲಕ್ಷ ನೆರವು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರವೀಣ್ ಕುಟುಂಬದ ಬ್ಯಾಂಕ್ ಖಾತೆಯ […]