ನಾಳೆ 108 ಅಡಿ ಮಾದಪ್ಪ ಪ್ರತಿಮೆ ಲೋಕಾರ್ಪಣೆ

ಬೆಂಗಳೂರು, ಮಾ.17- ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು, ಈ ನಡುವಲ್ಲೇ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿರುವ ಆಡಳಿತಾರೂಢ ಬಿಜೆಪಿ ಸರ್ಕಾರವು ಹಲವು ಯೋಜನೆಗಳಿಗೆ ಚಾಲನೆ ನೀಡುತ್ತಿದೆ. ಅಸಂಖ್ಯಾತ ಭಕ್ತರ ಪಾಲಿನ ದೈವ ಮಾಯ್ಕರ ಮಾದಪ್ಪನ ನೆಲದಲ್ಲಿ ಮುಗಿಲೆತ್ತರದಲ್ಲಿರುವ 108 ಅಡಿ ಪ್ರತಿಮೆ ಮೊದಲನೇ ಹಂತದ ಕಾಮಗಾರಿ ಮುಗಿದಿದ್ದು ಮುಖ್ಯಮಂತ್ರಿ, ಶ್ರೀಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಬಸವರಾಜ ಬೊಮ್ಮಾಯಿ ನಾಳೆ ಲೋಕಾರ್ಪಣೆ ಮಾಡಲಿದ್ದಾರೆ. ಜೊತೆಗೆ ಪ್ರಾಧಿಕಾರದ ವತಿಯಿಂದ ನಿರ್ಮಾಣಗೊಂಡಿರುವ ಬೆಳ್ಳಿರಥವೂ ಲೋಕಾರ್ಪಣೆ ಆಗಲಿದೆ. 20 […]