ಕಳವು ಮೊಬೈಲ್ ಪತ್ತೆ ಕಾರ್ಯಾಚರಣೆ ಚುರುಕು

ಬೆಂಗಳೂರು,ಮಾ.11- ಕೇಂದ್ರ ಸರ್ಕಾರದ ಸಿಇಐಆರ್ ವೆಬ್‍ಪೋರ್ಟಲ್ ನೆರವಿನಿಂದ ಕಳೆದು ಹೋಗಿರುವ ಮೊಬೈಲ್ ಫೋನ್‍ಗಳ ಪತ್ತೆ ಕಾರ್ಯ ಚುರುಕುಗೊಂಡಿದ್ದು, ಸಿಸಿಬಿ ಪೊಲೀಸರು 18 ಲಕ್ಷ ರೂ. ಮೌಲ್ಯದ 112 ಮೊಬೈಲ್‍ಗಳನ್ನು ವಶ ಪಡಿಸಿಕೊಂಡಿದ್ದಾರೆ. ಇ-ಲಾಸ್ಟ್ ನೋಂದಣಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರಿನಲ್ಲಷ್ಟೆ ಅಲ್ಲದೆ, ತಮಿಳುನಾಡು, ರಾಜಸ್ಥಾನ, ಕೇರಳ ಸೇರಿದಂತೆ ಇತರ ರಾಜ್ಯಗಳಲ್ಲಿ ಸಕ್ರಿಯವಾಗಿದ್ದ ಮೊಬೈಲ್‍ಗಳನ್ನು ಪತ್ತೆ ಹಚ್ಚಲಾಗಿದೆ. ದುಬಾರಿ ಬೆಲೆಯ ಮೊಬೈಲ್‍ಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಳೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ […]