ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ
ಬೆಂಗಳೂರು,ಮಾ.10- ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಉನ್ನತ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ರಾಜ್ಯದ 23 ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಪತ್ರ ಬರೆದಿದೆ. ಬೆಂಗಳೂರು, ಮೈಸೂರು, ಕರ್ನಾಟಕ, ಕುವೆಂಪು, ಗುಲ್ಬರ್ಗ, ಮಂಗಳೂರು, ತುಮಕೂರು, ಕನ್ನಡ, ಅಕ್ಕಮಹಾದೇವಿ, […]