ಪ್ರಶಾಂತ್ ಮಾಡಾಳ್ ಸೇರಿ ನಾಲ್ವರಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು,ಮಾ.3- ಲಂಚ ಸ್ವೀಕಾರದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಹಾಗೂ ಇತರ ನಾಲ್ವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದು ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಪ್ರಶಾಂತ್ ಅವರ ನಿವಾಸ, ಬನಶಂಕರಿಯಲ್ಲಿರುವ ಕೆಎಸ್‍ಡಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ನಿವಾಸ ಸೇರಿದಂತೆ ನಗರದಲ್ಲಿ ಮೂರು ಕಡೆ ಹಾಗೂ ಚನ್ನಗಿರಿಯಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ್ದರು. ಶಾಸಕ ಮಾಡಾಳ್ ವಿರೂಪಾಕ್ಷಪ್ಪರ […]