14 ಜಿಲ್ಲೆಗಳಲ್ಲಿ ಅತಿವೃಷ್ಟಿ, ಸಂತ್ರಸ್ತರಿಗೆ ಕಾಳಜಿ ಕಿಟ್

ಬೆಂಗಳೂರು,ಆ.8- ರಾಜ್ಯದ 14 ಜಿಲ್ಲೆಗಳಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದ 160 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಈವರೆಗೂ 73 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 21,727 ಜನರು ಸಂಕಷ್ಟಕ್ಕೀಡಾಗಿದ್ದಾರೆ. ಸಂಕಷ್ಟಕ್ಕೆ ಸಿಲುಕಿದವರಿಗೆ ಕಾಳಜಿ ಕಿಟ್‍ಗಳನ್ನು ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹಪೀಡಿತ ಭಾಗದಲ್ಲಿ 8100 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 10ರಿಂದ 15 ದಿನಗಳಿಗೆ ಆಗುವಷ್ಟು ಆಹಾರದ ಕಿಟ್‍ಗಳನ್ನು ನೀಡಲಾಗಿದೆ ಎಂದರು. ರಾಜ್ಯದ 21 ಜಿಲ್ಲೆಗಳಿಗೆ 200 ಕೋಟಿ ಬಿಡುಗಡೆ ಮಾಡಲಾಗಿದೆ. ಮನೆ […]