ಈಗಲೂ ಬೂದಿ ಮುಚ್ಚಿದ ಕೆಂಡದಂತಿದೆ ದಕ್ಷಿಣ ಕನ್ನಡ ಜಿಲ್ಲೆ, 144 ಸೆಕ್ಷನ್ ಮುಂದುವರಿಕೆ

ಬೆಂಗಳೂರು,ಜು.30- ಇಬ್ಬರು ಯುವಕರ ಕೊಲೆಯಿಂದ ಪ್ರಕ್ಷುಬ್ದವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮತ್ತಿತರ ಕಡೆ ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡದಂತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲೆಡೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಮಂಗಳೂರಿನ ಪುತೂರು, ಸುಳ್ಯ, ಕಡಬ, ಸೂರತ್ಕಲ್, ಮಂಗಳೂರು ನಗರ ಮತ್ತಿತರ ಕಡೆ ಈಗಲೂ 144 ಸೆಕ್ಷನ್ ಮುಂದುವರೆಸಲಾಗಿದೆ. ಇತ್ತ ಉಡುಪಿ, ಕಾರವಾರ, ಮಡಿಕೇರಿ, ಶಿವಮೊಗ್ಗ, ಬೆಂಗಳೂರು, ಹುಬ್ಬಳ್ಳಿ, ಧಾರವಾಡ,ಬಾಗಲಕೋಟೆ ಸೇರಿದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ತೀವ್ರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ನಡುವೆ ಮಂಗಳೂರು ಜಿಲ್ಲಾಕಾರಿ […]