14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಅಧಿಕಾರ ಸ್ವೀಕಾರ

ನವದೆಹಲಿ,ಆ.11- ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪರಾಷ್ಟ್ರಪತಿಯವರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ನಿರ್ಗಮಿತ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರಮೋದಿ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಉಪರಾಷ್ಟ್ರಪತಿಯವರು ರಾಜ್ಯಸಭೆಯ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಲಿದ್ದಾರೆ. ಇತ್ತೀಚೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 725 ಮತಗಳು ಚಲಾವಣೆಯಾಗಿದ್ದವು.ಅ […]