15 ಸಾವಿರ ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು, ಮಾ.10- ಶಿಕ್ಷಕರ ಕೊರತೆ ನೀಗಿಸಲು 15,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನ ಸಭೆಗೆ ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಪಿ.ರಾಜೀವ್ ಅವರ ಪರವಾಗಿ ದುರ್ಯೋಧನ ಐಹೊಳೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಶಿಕ್ಷಕರ ಕೊರತೆ ಇರುವುದು ನಿಜ. ಸದ್ಯಕ್ಕೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಮೇನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಆ ನಂತರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. […]